ಉ.ಕ ಸುದ್ದಿಜಾಲ ಬೆಳಗಾವಿ :
ಬೆಳಗಾವಿ ಎಸ್‌ಪಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಆರೋಪಿ ವಶಕ್ಕೆ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ, ಜನರಿಗೆ ವಂಚಿಸುತ್ತಿದ್ದ ಆರೋಪಿ ಬಂಧನ. ರಾಜಸ್ಥಾನ ಮೂಲದ ವ್ಯಕ್ತಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು.

ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ.
ನಕಲಿ ಖಾತೆ ತೆರೆದ ಬಗ್ಗೆ ಎಫ್‌ಐಆರ್ ದಾಖಲಿಸಿದ್ದ ಬೆಳಗಾವಿ ಎಸ್ಪಿ ಗದಗ ಮತ್ತು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹೆಸರಿನಲ್ಲೂ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ.
ಸಾಮಾಜಿಕ ಜಾಲತಾಣದಲ್ಲಿ ಯಾವ ಪೊಲೀಸ್ ಅಧಿಕಾರಿಗಳೂ ಹಣ ಕೇಳುವುದಿಲ್ಲ ಜಾಲತಾಣ ನಂಬಿ, ಯಾರೂ ಹಣ ಕೊಡಬಾರದು ಇಂಥ ಸಂಗತಿಗಳಿಂದ ಎಚ್ಚರದಿಂದ ಇರಬೇಕು ಎಂದು ಮನವಿ ಮಾಡಿದ ಎಸ್ಪಿ ಡಾ.ಭೀಮಾಶಂಕರ ಗುಳೇದ.