ಉ.ಕ ಸುದ್ದಿಜಾಲ ಬೆಳಗಾವಿ :

ನಾಪತ್ತೆಯಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಬರ್ಬರ ಹತ್ಯೆಯಾದ್ದು, ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ.

ಬೆನ್ನಿಗೆ ಮಾರಕಾಸ್ತ್ರದಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವ ದುಷ್ಕರ್ಮಿಗಳು, ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ನಿನ್ನೆ ರಾತ್ರಿ (ಬುಧವಾರ ಅ.19) ವಿದ್ಯಾರ್ಥಿಯನ್ನ ಕೊಲೆ ಮಾಡಿ ಎಸೆದಿರುವ ಹಂತಕರು.

ಶಿವಾಜಿ ನಗರ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ (16) ಕೊಲೆಯಾದ ವಿದ್ಯಾರ್ಥಿ ಬೆಳಗಾವಿಯ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ. ವಿದ್ಯಾರ್ಥಿಯ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅರೆ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿರುವ ಮೃತದೇಹ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಗಿರೀಶ್ ಭೇಟಿ ಪರಿಶೀಲನೆ. ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ.