ಉ.ಕ ಸುದ್ದಿಜಾಲ ಬೆಳಗಾವಿ :
ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ಶಾಲಾ ಮಕ್ಕಳು ಅಸ್ವಸ್ಥ ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದಲ್ಲಿ ಘಟನೆ. ಮಾರ್ಕಂಡೇಯ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ ಮಕ್ಕಳು.
ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳ ಆರೋಗ್ಯದಲ್ಲಿ ಏರುಪೇರು. ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದ್ದರಿಂದ ಊಟ ಸೇವಿಸಿ ಆರೋಗ್ಯದಲ್ಲಿ ಏರುಪೇರು ಆಗಿದೆ ಎಂಬ ಮಾಹಿತಿ. ಹೊಟ್ಟೆ ನೋವು, ವಾಂತಿ, ತಲೆಸುತ್ತು ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ.
ಖಾಸಗಿ ಆಸ್ಪತ್ರೆಗೆ ಡಿಎಚ್ಓ ಡಾ.ಈಶ್ವರ ಗಡಾದಿ, ಡಿಡಿಪಿಐ ಲೀಲಾವತಿ ಹಿರೇಮಠ ಭೇಟಿ, ಪರಿಶೀಲನೆ. ಮಕ್ಕಳು ಆರೋಗ್ಯವಾಗಿದ್ದಾರೆ, ಯಾವುದೇ ರೀತಿಯ ಸಮಸ್ಯೆ ಆಗಿಲ್ಲ. ಸದ್ಯ 24 ಮಕ್ಕಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಡಿಪಿಐ ಲೀಲಾವತಿ ಹಿರೇಮಠ ಮಾಹಿತಿ.
ಬೆಳಗಾವಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ಶಾಲಾ ಮಕ್ಕಳು ಅಸ್ವಸ್ಥ
