ಉ.ಕ ಸುದ್ದಿಜಾಲ ಬೆಳಗಾವಿ :
ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುತ್ತಿರುವ ಪರಿಣಾಮ ಜನ ಜೀವನ ಅಸ್ಥವ್ಯಸ್ಥಗೊಂಡಿದೆ. ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ಧಾರಾಕರ ಮಳೆ ಹಿನ್ನೆಲೆ ನಾಳೆಯಿಂದ ಎರಡು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ತಾಲೂಕು ಹಾಗೂ ಖಾನಾಪೂರ ತಾಲೂಕಿನಲ್ಲಿ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಜುಲೈ 22 ಮತ್ತು 23ರಂದು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪೂರ ಹಾಗೂ ಬೆಳಗಾವಿ ತಾಲೂಕಿನ ಸರ್ಕಾರಿ, ಅನುದಾನಿತ ಅನುದಾನ ರಹಿತ, ಪ್ರಾಥಮಿಕ ಪ್ರೌಢ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ.
ಖಾನಪೂರ ತಾಲ್ಲೂಕಿನಲ್ಲಿ ಮಾತ್ರ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮುಂಜಾಗ್ರತಾ ಕ್ರಮವಾಗಿ ಜುಲೈ 22 ರಿಂದ 23 ರ ವರೆಗೆ ರಜೆ ಘೋಷಣೆ ಮಾಡಲಾಗಿದೆ.