ಬೆಳಗಾವಿ :

ಬೆಳಗಾವಿಯಲ್ಲಿ ಅಕ್ಟೋಬರ್ 24 ರಂದು ನಡೆದಿದ್ದ ಸಿವಿಲ್ ಪೊಲೀಸ್ ಪೇದೆ ಪರೀಕ್ಷೆ ವೇಳೆಯಲ್ಲಿ ಬ್ಲೂಟೂತ್ ಬಳಸಿ ನಕಲಿಗೆ ಯತ್ನ. ರಾಮತೀರ್ಥ ನಗರದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಬೆಳಗಾವಿ ಪೊಲೀಸರು. ದಾಳಿ ವೇಳೆಯಲ್ಲಿ 12 ಜನರ ಬಂಧಿಸಿದ್ದ ಪೊಲೀಸರು.

33 ಮೊಬೈಲ್, 9 ಮಾಸ್ಟರ್ ಕಾರ್ಡ್ ಡಿವೈಸ್,  13 ಬ್ಲೂಟೂತ್, ಮೂರು ಟ್ಯಾಬ್, ಒಂದು ಲ್ಯಾಪ್ ಟಾಪ್ ವಶಕ್ಕೆ ಪಡೆದಿದ್ರು. ಇಬ್ಬರು ಪರೀಕ್ಷಾರ್ಥಿಗಳನ್ನು ಬಂಧಿಸಿದ್ದ ಪೊಲೀಸರು. ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಕೈವಾಡ ಶಂಕೆ? ಪ್ರಕರಣ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಗೃಹ ಇಲಾಖೆ ಆದೇಶ.