ಉ.ಕ ಸುದ್ದಿಜಾಲ ಬೆಂಗಳೂರು :

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಇಬ್ಬರು ಅಧಿಕಾರಿಗಳ ನಡುವಿನ ಕಿತ್ತಾಟ ವಿಚಾರ ಸಾಕಷ್ಟು ಸುದ್ದಿಯಾಗಿದ್ದು ಈ ಬೆನ್ನಲ್ಲೆ ಇದೀಗ  ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನ  ರಾಜ್ಯಸರ್ಕಾರ ವರ್ಗಾವಣೆ ಮಾಡಿದೆ.

ಐಪಿಎಸ್ ಅಧಿಖಾರಿ ಡಿ ರೂಪಾ ಅವರು ಕರಕುಶಲ ಅಭಿವೃದ್ದಿ ನಿಗಮದ ಎಂಡಿ ಆಗಿದ್ದರು. ರೋಹಿಣಿ ಸಿಂಧೂರಿ ಅವರು ರಾಜ್ಯ ಮುಜರಾಯಿ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದೀಗ ಇಬ್ಬರು ಅಧಿಕಾರಿಗಳನ್ನ  ಸ್ಥಳ ನಿಯೋಜನೆ ಮಾಡದೇ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ಅಲ್ಲದೆ ಐಎಎಸ್ ಅಧಿಕಾರಿ ಮೌನಿಷ್ ಮೌದ್ಗಿಲ್ ಅವರನ್ನೂ ಸಹ ವರ್ಗಾವಣೆ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ರೂಪಾ ಮೌದ್ಗಿಲ್ ಹಾಗೂ ರೋಹಿಣಿ ಸಿಂಧೂರಿ ಅವರ ನಡುವಿನ ಕಿತ್ತಾಟ ತಾರಕಕ್ಕೇರಿತ್ತು.

ಇಂದು ಬಹಿರಂಗ ಹೇಳಿಕೆ ನೀಡದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡದಂತೆ, ಅಖಿಲ ಭಾರತ ಸೇವೆಗಳ ನಿಯಮಗಳಿಗೆ ಬದ್ಧರಾಗಿರುವಂತೆ ಸೂಚಿಸಿ ಇಬ್ಬರು ಅಧಿಕಾರಿಗಳಿಗೆ ಸರ್ಕಾರ ನೋಟಿಸ್ ನೀಡಿತ್ತು. ಈ ಬೆನ್ನಲ್ಲೆ ಇದೀಗ ವರ್ಗಾವಣೆ ಮಾಡಲಾಗಿದೆ.