ಉ.ಕ ಸುದ್ದಿಜಾಲ ಚಿಕ್ಕೋಡಿ :

ಚಿಕ್ಕೋಡಿ ಪಟ್ಟಣದ ಕೆಎಲ್ಇ ಸಂಸ್ಥೆಯ ಬಸವ ಪ್ರಭು ಕೋರೆ ಮಹಾವಿದ್ಯಾಲಯದ ಹತ್ತಿರ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳ ನಿಲುಗಡೆಗಾಗಿ, ಸ್ಟೇಜ್ ಪಾಯಿಂಟ್ ಕಲ್ಪಿಸುವ  ಬೇಡಿಕೆ ಹಾಗೂ ವೇಗ ನಿಯಂತ್ರಣಕ್ಕೆ ರೋಡ್ ಹಂಪ್ಸಗಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿಕ್ಕೋಡಿ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.

ಸೂಕ್ತ ಬಸ್ ವ್ಯವಸ್ಥೆ ಇಲ್ಲದ್ದಕ್ಕೆ ರಸ್ತೆ ತಡೆದು ಪ್ರತಿಭಟಿಸಿದ ವಿದ್ಯಾರ್ಥಿಗಳು. ಚಿಕ್ಕೋಡಿ ಪಟ್ಟಣದ ಬಸವಪ್ರಭು ಕೋರೆ ಕಾಲೇಜು ಬಳಿ ಕೆಲ ಹೊತ್ತು ಧರಣಿ ನಡೆಸಿದರು. ಚಿಕ್ಕೋಡಿ- ವಿಜಯಪುರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ವೇಳೆ  ಚಿಕ್ಕೋಡಿ ಬಿ.ಕೆ ಕಾಲೇಜು ಬಳಿ ಜಮಾವಣೆಗೊಂಡ ನೂರಾರು ವಿದ್ಯಾರ್ಥಿಗಳು.

ಸಾರಿಗೆ ಇಲಾಖೆ ಅಧಿಕಾರಿಗಳಿಂದ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಸಮಸ್ಯೆ ಇತ್ಯರ್ಥವಾಗುವವರೆಗೂ ಧರಣಿ ಕೈಬಿಡಲ್ಲ ಎಂದು ವಿದ್ಯಾರ್ಥಿಗಳ ಪಟ್ಟು ಹಿಡಿದರು. ಅಂಕಲಿ ರಸ್ತೆ ಟ್ರಾಫಿಕ್ ಜಾಮ್ ಆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಚಿಕ್ಕೋಡಿ ತಾಲೂಕ ದಂಡಾಧಿಕಾರಿ ಮಾತನಾಡಿ ವಿದ್ಯಾರ್ಥಿಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಕೂಡಲೇ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಚಿಕ್ಕೋಡಿ ಪೊಲೀಸ್ ಅಧಿಕಾರಿಗಳು ಹಾಗೂ ಕೆಎಸ್ಆರ್‌ಟಿಸಿ ಚಿಕ್ಕೋಡಿಯ ಸಾರಿಗೆ ವಿಭಾಗ ನಿಯಂತ್ರಣಾಧಿಕಾರಿಗಳು ಉಪಸ್ಥಿತರಿದ್ದರು.