ಉ.ಕ ಸುದ್ದಿಜಾಲ ಚಿಕ್ಕೋಡಿ :
ದಸಾರ ಹಬ್ಬಕ್ಕೆ ಗ್ರಾಮಕ್ಕೆ ಬರುತ್ತಿದ್ದಾಗ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಟೈರ್ ಪಂಕ್ಚರ್ ಆಗಿ ಓರ್ವ ಮಹಿಳೆ ಮತ್ತು ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯಗಳಾದ ದುರ್ಘಟನೆ ನಿಪ್ಪಾಣಿ ತಾಲೂಕಿನ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುರ್ಲಿ ಗ್ರಾಮದ ಹತ್ತಿರ ನಡೆದಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುಗುಳಿಹಾಳ ಗ್ರಾಮದ ಲಕ್ಷ್ಮೀ ಕೊಪ್ಪದ (25) ಹಾಗೂ ಭಾಗ್ಯಶ್ರೀ ವಕಮಿ (13)ಮೃತರು. ರಾಮದರ್ಗು ತಾಲೂಕಿನ ಕಟಕೋಳ ಗ್ರಾಮದ ಹಣಮಂತ ಸಕ್ರಿ (23) ಮಾರುತಿ ಚುನಾಮಾದಾರ (6) ಗಂಭೀರವಾಗಿ ಗಾಯಾಗಳಾಗಿವೆ.ಮೂಲದ ಕರ್ನಾಟಕದವರಾದ ಮೃತರು ಮಹಾರಾಷ್ಟ್ರ ರಾಜ್ಯಕ್ಕೆ ಕೆಲಸ ತೆರಳಿದ್ದರು.
ದಸರಾ ಹಬ್ಬದ ನಿಮಿತ್ತ ತಮ್ಮೂರಿಗೆ ಒಂದೇ ಬೈಕ್ ನಲ್ಲಿ ನಾಲ್ವರು ಬರುತ್ತಿದ್ದಾಗ ಬೈಕ್‌ನ ಟಾಯರ್ ಪಂಕ್ಚರ್ ಆಗಿದೆ. ಈ ವೇಳೆ ನೆಲಕ್ಕೆ ಬಿದ್ದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ನಿಪ್ಪಾಣಿ ಸರ್ಕಾರಿ ಆಸ್ಪತ್ರೆಗೆ ದಾಖಿಸಲಾಗಿದೆ.
ಸ್ಥಳಕ್ಕೆ ನಿಪ್ಪಾಣಿ ಗ್ರಾಮೀಣ ಪೊಲೀಸು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.