ಉ.ಕ ಸುದ್ದಿಜಾಲ ಚಿಕ್ಕೋಡಿ :

ಪಂಜಾಬ್ ಘಟನೆ ಖಂಡಿಸಿ ಚಿಕ್ಕೋಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ. ಬಿಜೆಪಿ ಕಚೇರಿಯಿಂದ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ. ಬಸವೇಶ್ವರ ಸರ್ಕಲ್ ನಲ್ಲಿ ಪಂಜಾಬ್ ಸಿಎಂ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ.

ಚಿಕ್ಕೋಡಿ ಜಿಲ್ಲಾಧ್ಯಕ್ಷ ರಾಜೇಶ ನೇರ್ಲಿ ನೇತೃತ್ವದಲ್ಲಿ ಪ್ರತಿಭಟನೆ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು. ಬಳಿಕ ಚಿಕ್ಕೋಡಿ ತಹಶೀಲ್ದಾರರ ಕಚೇರಿಗೆ ತೆರಳಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಪಂಜಾಬ್ ಕಾಂಗ್ರೆಸ್ ಸರ್ಕಾರ ವಜಾ ಮಾಡುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಿದ ಬಿಜೆಪಿ ಕಾರ್ಯಕರ್ತರು.