ಚಿಕ್ಕೋಡಿ :

ಚಿಕ್ಕೋಡಿಯ ಕೆಎಲ್ಇ ಇಂಜಿನೀಯರಿಂಗ್ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ಚಿಕ್ಕೋಡಿ ಸಹಭಾಗಿತ್ವದೊಂದಿಗೆ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಚಿಕ್ಕೋಡಿ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ಪ್ರಸಾದ ರಾಂಪುರೆ ನಮ್ಮ ಮಹಾವಿದ್ಯಾಲಯದಲ್ಲಿ ಕೊವಿಡ್ ನಿಯಮಾವಳಿಗಳನ್ನು ಪಾಲಿಸಲಾಗುತ್ತಿದೆ. ಈಗಾಗಲೇ 80% ವಿದ್ಯಾರ್ಥಿಗಳಿಗೆ ಹಾಗೂ ಪ್ರಾಧ್ಯಾಪಕರಿಗೆ ಕೊವಿಡ್ ಲಸಿಕೆ ಪಡೆದುಕೊಂಡಿದ್ದು, ಇನ್ನುಳಿದವರಿಗೆ ಇಂದು ನೀಡಲಾಗಿದೆ. ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಸಿಬ್ಬಂದಿ ಲಸಿಕೆ ಪಡೆದುಕೊಂಡರು. ಎನ್‌ಎಸ್‌ಎಸ್ ಅಧಿಕಾರಿ ಪ್ರೊ. ವಿಶಾಲ ದಾನವಾಡೆ ಸಂಯೋಜಿಸಿದರು.

ಈ ಸಂಧರ್ಭದಲ್ಲಿ ಪ್ರೊ ಸತೀಶ ಭೋಜನ್ನವರ, ಪ್ರೊ ಸುನೀಲ ಹೆಬ್ಬಾಳೆ, ವಿಭಾಗ ಮುಖ್ಯಸ್ಥರಾದ ಪ್ರೊ ಶ್ರೀನಿವಾಸ ಸರದೇಶಪಾಂಡೆ, ಪ್ರೊ ಕುಮಾರ ಚೌಗಲಾ, ಪ್ರೊ ಪ್ರದೀಪ ಹೊದ್ಲೂರ, ಪ್ರೊ ಬಸವರಾಜ ಚೌಕಿಮಠ, ಡಾ. ಆರ್ ಕೆ. ಪಾಟೀಲ, ಪ್ರೊ ಸಚೀನ ಮೆಕ್ಕಳಕಿ ಉಪಸ್ಥಿತರಿದ್ದರು.