ಉ.ಕ ಸುದ್ದಿಜಾಲ ಚಿಕ್ಕೋಡಿ :
ಲೋಕಸಭೆ ಚುನಾವಣೆ ನಿಗಧಿಯಾದ ದಿನದಿಂದ ಎಲ್ಲ ಕಡೆಗೂ ಈಗಾಗಲೇ ಚಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಪ್ರತಿ ವಾಹನವನ್ನ ತಪಾಸಣೆ ಮಾಡುತ್ತಿರುವ ಪೋಲಿಸರು.
ಆದರೆ, ಚಿಕ್ಕೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.ದಾಖಲೆ ಇಲ್ಲದೇ ಹಣ ಸಾಗಿಸುತ್ತಿದ್ದ ಇಬ್ಬರು ವಶಕ್ಕೆ ಪಡೆದ ಲಕ್ಷಾಂತರ ಹಣ ವಶಪಡಿಸಿಕೊಂಡಿದ್ದಾರೆ.
ಚಿಕ್ಕೋಡಿಯಿಂದ ಮಹಾರಾಷ್ಟ್ರದ ಇಂಚಲಕರಂಜಿ ಪಟ್ಟಣಕ್ಕೆ ತೆರಳುತ್ತಿದ್ದ ವ್ಯಕ್ತಿ. ಚಿಕ್ಕೋಡಿ ಬಸ್ ಸ್ಟ್ಯಾಂಡ್ ಬಳಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಅವರ ಬಳಿ ದಾಖಲೆ ಇಲ್ಲದೆ 16 ಲಕ್ಷ 30 ಸಾವಿರ ಹಣ ಸಾಗಿಸುತ್ತಿದ್ದಾಗ ವಶಕ್ಕೆ ಪಡೆದ ಚಿಕ್ಕೋಡಿ ಪೋಲಿಸರು.
ಬಸ್ ಮೂಲಕ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳು. ಖಚಿತ ಮಾಹಿತಿ ಮೇರೆಗೆ ಇಬ್ಬರ ಮೇಲೆ ದಾಳಿ ಮಾಡಿದ ಚಿಕ್ಕೋಡಿ ಪೊಲೀಸರು. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.