ಉ.ಕ ಸುದ್ದಿಜಾಲ ಚಿಕ್ಕೋಡಿ :

ನದಿಗೆ ನೈವದ್ಯ ಬಿಡಲು ಹೋಗಿ ಕಾಲು ಜಾರಿ ಬಿದ್ದು ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ‌ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಕೃಷ್ಣಾನದಿಯಲ್ಲಿ ನಡೆದಿದೆ.

ಸಂಗೀತಾ ಶಿವಾಜಿ ಮಾಂಜ್ರೆಕರ(40) ಸಾವನ್ನಪ್ಪಿರುವ ಮಹಿಳೆ ಎಂದು ತಿಳಿದು ಬಂದಿದೆ.ಇವತ್ತು ‌ಮುಂಜಾನೆ ಕೃಷ್ಣಾನದಿಗೆ ನೈವದ್ಯ ಬಿಡಲು ಹೋಗಿ ಕಾಲು ಜಾರಿ ಬಿದ್ದು ನದಿಯಲ್ಲಿ ಸಾವನ್ನಪ್ಪಿದ್ದಾರೆ.

ಅಗ್ನಿಶಾಮಕದಳ ಹಾಗೂ ಎಸ್.ಡಿ.ಆರ್.ಎಫ್ ತಂಡಗಳು ಹಾಗೂ ತಹಶಿಲ್ದಾರ ಚಿದಬರಂ ಕುಲಕರ್ಣಿ ನೇತೃತ್ವದಲ್ಲಿ ಶವಕ್ಕಾಗಿ ಹುಡಕಾಟ ನಡೆಸಲಾಗುತ್ತಿದೆ.ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.