ಉ.ಕ ಸುದ್ದಿಜಾಲ ಚಿಕ್ಕೋಡಿ :

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ವಡಗೋಲ ಗ್ರಾಮದ ಮಯತಲಕೋಡಿ ಬೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಸ್ಥಾನದ ಕಾಣಿಕೆ ಪೆಟ್ಟಿಗೆಯನ್ನು ಹೊತ್ತೊಯ್ದ ಖದೀಮರು.

ಸಿ ಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾದ ಕಳ್ಳರ ಕೈಚಳಕ ಸೆರೆಯಾಗಿದೆ‌‌. ಬುಧವಾರ ರಾತ್ರಿ ಕಳ್ಳತನವಾಗಿದ್ದು, ಗುರುವಾರ ಬೆಳಗ್ಗೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ವಿಷಯ ತಿಳಿದಿದೆ. ದೇವಸ್ಥಾನದಲ್ಲಿ ಯಾರೂ ಇಲ್ಲದಿದ್ದಾಗ ಮೂವರು ಅಪರಿಚಿತರಿಂದ ಕೃತ್ಯ ನಡೆದಿದೆ.

ಘಟನಾ ಸ್ಥಳಕ್ಕೆ ಸದಲಗಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತಂತೆ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ದೇವಸ್ಥಾನದಲ್ಲಿ ಕಳ್ಳತನ ಮಾಡಿರುವ ವಿಡಿಯೋ