ಉ.ಕ ಸುದ್ದಿಜಾಲ‌ ಚಿಕ್ಕೋಡಿ :

ಅಗಸ್ಟ 28 ರಂದು ಮದುವೆ ಮನೆಯಲ್ಲಿ ಊಟ ಸೇವಿಸಿ ಅಸ್ವಸ್ಥಗೊಂಡಿದ್ದ ನೂರಾರು ಜನ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿದ್ದ ಶಬ್ಬಿರ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಶಬ್ಬಿರ ಮಕಾಂದಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.

ಕಳೆದ ಆರು ದಿನಗಳ ಹಿಂದೆ ತಾಲೂಕಿನ ಹಿರೆಕೋಡಿ ಗ್ರಾಮದ ಪಟೇಲ್ ಎಂಬುವವರ ಮದುವೆ ಸಮಾರಂಭದಲ್ಲಿ ಮಾಡಿದ್ದ ಮಾಂಸಾಹಾರ ಊಟ ಸೇವಿಸಿ 100 ಕ್ಕೂ ಅಧಿಕ ಜನ ಅಸ್ವಸ್ಥರಾಗಿದ್ದರು. 

ಘಟನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಬ್ಬಿರ ಮಕಾಂದಾರ (58) ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಕಣ್ಣು ಕಳೆದುಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲವರು ಹೆಚ್ಚಿನ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.