ಉ.ಕ ಸುದ್ದಿಜಾಲ ಚಿಕ್ಕೋಡಿ :

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಕೆಎಲ್ಇ ಸಂಸ್ಥೆಯ ಬಸಪ್ರಭು ಕೋರೆ ಮಹಾವಿದ್ಯಾಲಯದ ಬಿಎ ವಿಭಾಗದ ವಿದ್ಯಾರ್ಥಿಗಳು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ,  ಯೂನಿವರ್ಸಿಟಿ ಬ್ಲೂ ಆಗಿ ವಿಶೇಷ ಸಾಧನೆಗೈದಿದ್ದಾರೆ.

ಬಾಗಲಕೋಟೆಯ ಬಸವೇಶ್ವರ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿದ್ಯಾಲಯ ಮಟ್ಟದ ಮಹಿಳಾ ಹಾಕಿ ಸ್ಪರ್ಧೆಯಲ್ಲಿ ಚಿಕ್ಕೋಡಿಯ ಬಸವ ಪ್ರಭು ಕೋರೆ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಅಶ್ವಿನಿ ಬಾನಗೆ, ಸೀಮಾ ಶೇಡಬಾಳ, ಸಾಕ್ಷಿ ಮದಿಹಳ್ಳಿ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗುವ ಮೂಲಕ ವಿಶೇಷ ಸಾಧನೆಗೈದಿದ್ದಾರೆ.

ವಿದ್ಯಾರ್ಥಿಗಳ ವಿಶೇಷ ಸಾಧನೆಗೆ ಕೆ.ಎಲ್.ಇ ಸಂಸ್ಥೆಯ ಚೇರ್ಮನರಾದ ಪ್ರಭಾಕರ ಕೋರೆ, ಕಾಲೇಜಿನ ಪ್ರಾಚಾರ್ಯ ಪ್ರೊ.ಯು.ಆರ್.ರಜಪೂತ್,  ಡಾ. ಎಸ್.ಎಮ್. ಪಾನಬುಡೇ ಹಾಗೂ ಕಾಲೇಜಿನ ದೈಹಿಕ ನಿರ್ದೇಶಕರಾದ ಪ್ರವೀಣ್ ವಾಘ್ಮೊರೆ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.