ಉ.ಕ ಸುದ್ದಿಜಾಲ ಚಿಕ್ಕೋಡಿ :
ಇನ್ನೊಂದು ವಾರದಲ್ಲಿ ಕಾಂಗ್ರೆಸ್ ಟಿಕೆಟ್ ಬಗ್ಗೆ ಘೋಷಣೆ ಮಾಡಬಹುದು ಎಲ್ಲರೂ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ ದುಡಿಯೋಣ. ಯಾರ ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಅವರು ಟಿಕೆಟ್ ಘೋಷಣೆ ಆಗದೇ ಇರೋದ್ರಿಂದ ಭಿನ್ನಮತ ಇರೋದು ಸಹಜ. ಟಿಕೆಟ್ ಘೋಷಣೆ ಆದ್ಮೇಲೆ ಎಲ್ಲವೂ ತಣ್ಣಗಾಗಲಿದೆ. ಎಲ್ಲರೂ ಸೇರಿ ಟಿಕೆಟ್ ಘೋಷಣೆ ಆದವರ ಪರವಾಗಿ ಕೆಲಸ ಮಾಡಬೇಕಾಗುತ್ತದೆ.
ಈಗಾಗಲೇ ಹಲವಾರು ಜನ ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎನ್ನುತ್ತಿದ್ದಾರೆ. ಇಲ್ಲಿಯ ಪರಿಸ್ಥಿತಿ ನೋಡಲೇಂದೆ ಸುರ್ಜೇವಾಲಾ ಅವರು ಬಂದಿದ್ದಾರೆ. ಯಾರ ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೇಟ್ ನೀಡಲಾಗುತ್ತದೆ ಎಂದು ಹೇಳಿದರು.