ಉ.ಕ ಸುದ್ದಿಜಾಲ ಚಿಕ್ಕೋಡಿ :

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ಪ್ರವಚನಕ್ಕೆ ಆಗಮಿಸಿದ್ದ ಸಿದ್ದೇಶ್ವರ ಸ್ವಾಮೀಜಿ ಅವರು ನಿನ್ನೆ ಸಾಯಂಕಾಲ ಕಾಲು ಜಾರಿ ಬಿದ್ದಿದ್ದರಿಂದ ಅವರನ್ನು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿರುವ ಕನ್ನೇರಿಮಠದಲ್ಲಿ ಸಿದ್ದೇಶ್ವರ ಶ್ರೀಗಳಿಗೆ ಚಿಕಿತ್ಸೆ ನೀಡಲಾಗಿತ್ತು ಸದ್ಯ ನಡೆದಾಡುವ ದೇವರಾದ ಸಿದ್ಧೇಶ್ವರ ಶ್ರೀಗಳು ಕ್ಷೇಮ, ಭಕ್ತರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯಪುರ ಜ್ಞಾನಯೋಗಾಶ್ರಮದಿಂದ ಪ್ರಕಟಣೆ ಹೊರಡಿಸಲಾಗಿದ್ದು, ಶ್ರೀಗಳು ಕಾಲು ಜಾರಿ ಬಿದ್ದಿದ್ದು ಅವರ ಬಲಗಾಲಿಗೆ ಸ್ವಲ್ಪ ಪೆಟ್ಟಾಗಿದೆ. ಸಧ್ಯ ಮಹಾರಾಷ್ಟ್ರದ ಕಣ್ಣೇರಿಯ ಸಿದ್ಧಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಷ್ಟು ಭೇಗ ಶ್ರೀಗಳು ಗುಣಮುಖರಾಗಲಿದ್ದು ಭಕ್ತರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.