ಉ.ಕ ಸುದ್ದಿಜಾಲ ಚಿಕ್ಕೋಡಿ :

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವಪತ್ತೆಯಾಗಿದೆ.

ಮಹಿಳೆಯು ತನ್ನ ಬ್ಯಾಗ ಹಾಗೂ ಚಪ್ಪಲಿಯನ್ನು ನದಿಯ ದಡದಲ್ಲಿ ಬಿಟ್ಟು ನದಿಗೆ ಹಾರಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾಳೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.

ಆತ್ಮಹತ್ಯೆಯನ್ನು ಮಾಡಿಕೊಂಡ ಮಹಿಳೆಯು‌ ನಿನ್ನೆ ರಾತ್ರಿ 8 ಗಂಟೆಯವರೆಗೆ ನದಿಯ ದಡದಲ್ಲಿ ಕುಳಿತುಕೊಂಡಿದ್ದಳು ಎಂದು ಸ್ಥಳೀಯರು  ಮಾಹಿತಿಯನ್ನು ನೀಡಿದ್ದು, ಅಂಕಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.