ಉ.ಕ ಸುದ್ದಿಜಾಲ ಚಿಕ್ಕೋಡಿ :

ಇನ್ನೂ ಉದ್ಘಾಟನೆಯಾಗದ ತಾಯಿ-ಮಗು ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಸೂಕ್ತ ಚಿಕಿತ್ಸೆ ಸಿಗದೆ ಮೃತಪಟ್ಟಿರುವ ಘಟನೆ ಇಲ್ಲಿನ ಬಾಣಂತಿಖೋಡಿ ತಾಯಿ- ಮಗು ಆಸ್ಪತ್ರೆಯಲ್ಲಿ ನಡೆದಿದೆ.

ಹೆರಿಗೆಗೆಂದು ದಾಖಲಾದ ಮಹಿಳೆಗೆ ಸೂಕ್ತ ಚಿಕಿತ್ಸೆ -ಸಿಗದೆ ಮೃತಪಟ್ಟಿದ್ದಾಳೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ. ಮೃತಳನ್ನು ಜಾರಿ ಗಲ್ಲಿ ಫೀಜಾ ಆತಿಫ್ ಸನದಿ ಎಂದು ಗುರುತಿಸಲಾಗಿದೆ.

ಮೃತ ಮಹಿಳೆ ಹೆರಿಗೆಂದು ಇಲ್ಲಿನ ತಾಯಿ-ಮಗು ಆಸ್ಪತ್ರೆಗೆ ದಾಖಲಾಗಿದ್ದಳು ಎಂದು ಪೋಷಕರು ತಿಳಿಸಿದ್ದಾರೆ. ರಾಜ್ಯ-ಕೇಂದ್ರ ಸರಕಾರ ಅತಿ ಕಡು ಬಡವರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ನೀಟ್ಟಿನಲ್ಲಿ ಇಲ್ಲಿನ ಜನಪ್ರತಿನಿಧಿಗಳು ತಾಯಿ-ಮಗು ಆಸ್ಪತ್ರೆ ಪ್ರಾರಂಭಿಸಿದ್ದರು.

ಅದೇ ಆಸ್ಪತ್ರೆಯಲ್ಲಿ ಬಾಣಂತಿ ಪ್ರಾಣ ಚೆಲ್ಲಿರುವುದು ಇದೀಗ ಸಂಶಯಕ್ಕೆ ಎಡೆ ಮಾಡಿ ಕೊಟ್ಟಿದೆ. ಮಹಿಳೆ ಸಾವಿನ ಬಗ್ಗೆ ಚಿಕ್ಕೋಡಿ ಎಸಿ ಸುಭಾಸ ಸಂಪಗಾಂವಿ ಖಚಿತಪಡಿಸಿದ್ದಾರೆ.