ಉ.ಕ ಸುದ್ದಿಜಾಲ ಚಿಕ್ಕೋಡಿ :

ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನೋರ್ವನನ್ನು ಚಿಕ್ಕೋಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ನಿನ್ನೆ ಸಂಜೆ ಶಾಲೆಯಿಂದ ಅಳುತ್ತಾ ಮರಳಿದ ಬಾಲಕಿಗೆ ಪೋಷಕರು ಪ್ರಶ್ನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಾಲಕಿಯ ತಂದೆ ಇತರೆ ಪೋಷಕರಿಗೆ ಮಾಹಿತಿ ನೀಡಿ ವಿಚಾರಿಸಿದಾಗ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಈ ಕಾಮುಕ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು ಉಳಿದ ಪೋಷಕರು ಸಹ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಆರೋಪಿ ಶಿಕ್ಷಕನ ವಶಕ್ಕೆ ಪಡೆದ ಚಿಕ್ಕೋಡಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.