ಉ.ಕ ಸುದ್ದಿಜಾಲ ಚಿತ್ರದುರ್ಗ :
ಚಿತ್ರದುರ್ಗ ಬಸ್ ದುರಂತದಲ್ಲಿ ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ.
ಬಸ್ ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಿಎಂ, ಬಳಿಕ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ 5 ಲಕ್ಷ ಸರ್ಕಾರದಿಂದ ಪರಿಹಾರ ನೀಡಲಾಗುವುದು. ಅದೇ ರೀತಿ, ಗಾಯಾಳುಗಳಿಗೆ ತಲಾ 50 ಸಾವಿರ ಘೋಷಣೆ ಮಾಡಿದ್ದಾರೆ.
ನಿನ್ನೆ ರಾತ್ರಿ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಬಸ್ ದುರಂತಕ್ಕೆ ಒಳಗಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ಎದುರಿಗೆ ಬರುತ್ತಿದ್ದ ಲಾರಿ ಡಿವೈಡರ್ಗೆ ಡಿಕ್ಕಿ ಹೊಡೆದು, ಬಸ್ಗೆ ಬಂದು ಗುದ್ದಿದೆ. ಲಾರಿ, ನೇರವಾಗಿ ಬಸ್ನ ಡೀಸೆಲ್ ಟ್ಯಾಂಕ್ಗೆ ಗುದ್ದಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿಯ ಜ್ವಾಲೆ ಜೋರಾಗಿ ಆವರಿಸಿ ಬಸ್ಸಿನಲ್ಲಿದ್ದ ನಾಲ್ವರು ಸಜೀವ ದಹನಗೊಂಡಿದ್ದಾರೆ. ಜೊತೆಗೆ ಲಾರಿ ಚಾಲಕ ಕೂಡ ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ 32 ಮಂದಿ ಇದ್ದರು. ಅವರಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅಪಘಾತ ಹಿನ್ನೆಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಯಾಕೆಂದರೆ ಬಸ್ಸಿನಲ್ಲಿದ್ದ ಬಹುತೇಕ ಪ್ರಯಾಣಿಕರು ನಿದ್ದೆಗೆ ಜಾರಿದ್ದರು.
ಚಿತ್ರದುರ್ಗ ಬಸ್ ದುರಂತದಲ್ಲಿ ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

