ಚಿತ್ರದುರ್ಗ :
ಪಂಚ್ಚರ್ ಆಗಿ ನಿಂತಿದ್ದ ಈರುಳ್ಳಿ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 40 ರಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಈರುಳ್ಳಿ ಲಾರಿಗೆ ಪಂಚ್ಚರ್ ಹಾಕುತ್ತಿದ್ದ ವೇಳೆಯಲ್ಲಿ ಗ್ಯಾಸ್ ಟ್ಯಾಂಕರ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ವೇಳೆ ದುರಂತ ನಡೆದಿದೆ. ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರೋಣ ಮೂಲದ ಚಾಲಕ ಶರಣಪ್ಪ ಸಾವನಪ್ಪಿರುವ ದುರ್ದೈವಿಗಳು. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.