ಉ.ಕ ಸುದ್ದಿಜಾಲ ದಾವಣಗೆರೆ :
ಪಂಚಭೂತಗಳಲ್ಲಿ ಲೀನರಾದ ಶಾಮನೂರು ಶಿವಶಂಕರಪ್ಪ ಸರ್ಕಾರಿ ಸಕಲ ಗೌರವಗಳೊಂದಿಗೆ ಅಂತಿಮ ನಮನ ಲಿಂಗಾಯಿತ ಸಂಪ್ರದಾಯದಂತೆ ಅಂತ್ಯಕ್ರಿಯೆ ಅಪಾರ ಸಂಖ್ಯೆಯಲ್ಲಿ ನೆರೆದ ಜನಸ್ತೋಮ.
ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಯೂ ಸಕಲ ಸರ್ಕಾರಿ ಗೌರವಗಳೊಂದಿಗೆ ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯ ಕಲ್ಲೇಶ್ವರ ಮಿಲ್’ನಲ್ಲಿ ನೆರವೇರಿತು.
ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು 95ನೇ ವಯಸ್ಸಿನಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಭಾನುವಾರ ಸಂಜೆ ಕೊನೆಯುಸಿರೆಳೆದರು. ಮೊದಲಿಗೆ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ಅವರ ಹಿರಿಯ ಪುತ್ರ ಎಸ್.ಎಸ್. ಬಕ್ಕೇಶ್ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು.
ಅಲ್ಲಿ ಪಾರ್ಥಿವ ಶರೀರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಧಾರ್ಮಿಕ ವಿಧಿವಿಧಾನಗಳು ಅವರಗೊಳ್ಳದ ಓಂಕಾರೇಶ್ವರ ಶಿವಾಚಾರ್ಯ ಸ್ವಾಮೀಜಿ ಮತ್ತು ಕಣವಕೊಪ್ಪ ಸ್ವಾಮೀಜಿ ಅವರ ನೇತೃತ್ವದಲ್ಲಿ ನೆರವೇರಿತು. ಬಳಿಕ, ಮೃತದೇಹವನ್ನು ದ್ವಿತೀಯ ಪುತ್ರ ಎಸ್.ಎಸ್. ಗಣೇಶ್ ಅವರ ನಿವಾಸಕ್ಕೆ ಕೊಂಡೊಯ್ದು ಪೂಜೆ ಸಲ್ಲಿಸಿ,
ಕೊನೆಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಅಂತಿಮವಾಗಿ ಸಾರ್ವಜನಿಕ ದರ್ಶನಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ದಾವಣಗೆರೆಯಲ್ಲಿ ಮಧ್ಯಾಹ್ನ ಮೂರರವರೆಗೂ ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು.
ಶಾಮನೂರು ಶಿವಶಂಕರಪ್ಪನವರ ಅಂತಿಮ ದರ್ಶನದ ಬಳಿಕ ದಾವಣಗೆರೆಯ ಪ್ರಮುಖ ರಸ್ತೆಗಳಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಮನೂರು ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಗೌರವ ವಂದನೆ ಸಲ್ಲಿಸಲಾಯಿತು. ರಾಷ್ಟ್ರಗೀತೆ ಹಾಡುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ಪಾರ್ಥಿವ ಶರೀರದ ಮೇಲೆ ರಾಷ್ಟ್ರಧ್ವಜ ಹೊದಿಸಿ ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು.
ಶಾಮನೂರು ಅವರ ಧರ್ಮಪತ್ನಿ ಪಾರ್ವತಮ್ಮ ಸಮಾಧಿ ಕಲ್ಲೇಶ್ವರ ಮಿಲ್‌ನಲ್ಲಿದೆ. ಅದರ ಪಕ್ಕದಲ್ಲೇ ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪನವರ ಅಂತ್ಯಕ್ರಿಯೆ ನೆರವೇರಿತು.
ಪುತ್ರ, ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಹಾಗೂ ಮೂವರು ಸುಪುತ್ರರು ಮಕ್ಕಳು, ನಾಲ್ವರು ಸುಪುತ್ರಿಯರು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು, ಅಭಿಮಾನಿಗಳು ಮತ್ತು ದಾವಣಗೆರೆಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.

