ಉ.ಕ ಸುದ್ದಿಜಾಲ ಧಾರವಾಡ :
ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ, ಇಬ್ಬರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಂಬೂರ ಕ್ರಾಸ್ ಬಳಿ ನಡೆದಿದೆ.
ನೂರಅಹ್ಮದ್ ಹಾಗೂ ಜಾವೀದ್ ಪಠಾಣ್ ಸಾವನ್ನಪ್ಪಿದ ಸವಾರರು. ಧಾರವಾಡದ ಜಿಲ್ಲಾ ಆಸ್ಪತ್ರೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಮೃತರು, ರವಿವಾರ ರಜೆ ಇದ್ದ ಕಾರಣ ಗೋವಾಗೆ ಪ್ರಯಾಣ ಬೆಳೆಸಿದ್ದರು. ಗೋವಾದಿಂದ ಮರಳಿ ಬರುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.