ಉ.ಕ ಸುದ್ದಿಜಾಲ ಧಾರವಾಡ :

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಕ್ಕಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಯುವಕ ಯತ್ನಿಸೊರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ.

ಸಂತೋಷ್ ಕೊರಡಿ ಆತ್ಮಹತ್ಯೆಗೆ ಯತ್ನಿಸಿರೋ ಯುವಕ, ವಯಸ್ಸಾದರೂ ಮದುವೆಯಾಗಿಲ್ಲ ಅನ್ನೋ ಬೇಸರ ಹಿನ್ನೆಲೆ ಮನನೊಂದು ಗ್ರಾಮದ ಸ್ಮಶಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ನಂತರ ಸ್ಥಳೀಯರ ಸಹಾಯದಿಂದ ಸಂತೋಷ ಬದುಕುಳಿದಿದ್ದಾನೆ. ಸದ್ಯ ಗಾಯಗೊಂಡಿರೋ ಸಂತೋಷಗೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.