ಉ.ಕ ಸುದ್ದಿಜಾಲ ದೆಹಲಿ :

ಲೋಕಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ ಎಂಬ ಸುದ್ದಿ ವಾಟ್ಸಾಪ್ ಸಂದೇಶಗಳಲ್ಲಿ ಹರಿದಾಡುತ್ತಿದೆ. ಆದರೆ ಇದು ಸುಳ್ಳು ಸುದ್ದಿ, ಈವರೆಗೂ ಯಾವುದೇ ವೇಳಾಪಟ್ಟಿ ಪ್ರಕಟಿಸಿಲ್ಲ ಎಂದು ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದೆ.

ಆಯೋಗವು ಚುನಾವಣೆಗೆ ಸಂಬಂಧಿಸಿದ ವೇಳಾಪಟ್ಟಿ ಬಿಡುಗಡೆ ಮಾಡಲು ಇನ್ನೂ ಕೆಲವು ವಾರಗಳಿವೆ. ಲೋಕಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ ಎಂಬ ಸುದ್ದಿ ವಾಟ್ಸಾಪ್ ಸಂದೇಶಗಳಲ್ಲಿ ಹರಿದಾಡುತ್ತಿದೆ.

ಆದರೆ ಇದು ಸುಳ್ಳು ಸುದ್ದಿ, ಈವರೆಗೂ ಯಾವುದೇ ವೇಳಾಪಟ್ಟಿ ಪ್ರಕಟಿಸಿಲ್ಲ ಎಂದು ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದೆ. ಆಯೋಗವು ಚುನಾವಣೆಗೆ ಸಂಬಂಧಿಸಿದ ವೇಳಾಪಟ್ಟಿ ಬಿಡುಗಡೆ ಮಾಡಲು ಇನ್ನೂ ಕೆಲವು ವಾರಗಳಿವೆ.

ಚುನಾವಣಾ ಆಯೋಗದ ಹೆಸರಿನಲ್ಲಿ ವಾಟ್ಸಾಪ್‌ನಲ್ಲಿ ಸುಳ್ಳು ಸುದ್ದಿ ಹರಡಿರುವ ಕಿಡಿಗೇಡಿಗಳು. ಲೋಕಸಭೆ ಚುನಾವಣೆಯ ನಕಲಿ ವೇಳಾಪಟ್ಟಿ ಸೃಷ್ಟಿಸಿ ಹರಡುವ ಮೂಲಕ ಜನರಲ್ಲಿ ಗೊಂದಲ
ಸುದ್ದಿಗೋಷ್ಠಿ ಮೂಲಕ ಅಧಿಕೃತ ವೇಳಾಪಟ್ಟಿ ಪ್ರಕಟಿಸುವುದಾಗಿ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಇನ್ನೂ ಸಿದ್ಧತೆಗಳನ್ನು ನಡೆಸುತ್ತಿದೆ. ಆದರೆ ಈಗಲೇ ಚುನಾವಣೆಯ ಕುರಿತು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಚುನಾವಣೆ ಹಾಗೂ ಅದಕ್ಕೆ ಸಂಬಂಧಿಸಿದ ಇತರೆ ಸುಳ್ಳು ಸುದ್ದಿಗಳನ್ನು ಹರಡದಂತೆ ತಡೆಯಲು ಚುನಾವಣಾ ಆಯೋಗ ವಿವಿಧ ರೀತಿಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಆದರೆ ಕೆಲವು ಕಿಡಿಗೇಡಿಗಳು ಈಗಲೇ ಸುಳ್ಳು ಮಾಹಿತಿಗಳನ್ನು ಸೃಷ್ಟಿಸಿ ಹರಡುತ್ತಿರುವ ಮೂಲಕ ಜನರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ನಡೆಸುತ್ತಿದ್ದಾರೆ.

ಚುನಾವಣಾ ಆಯೋಗವು ಮಾರ್ಚ್ 12 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 19ರಿಂದ ಚುನಾವಣೆ ನಡೆಯಲಿದೆ ಹಾಗೂ ಮೇ 22 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂಬಂತಹ ಸುದ್ದಿ ಹರಡಿದೆ.

ಮಾರ್ಚ್ 28ರಂದು ಚುನಾವಣಾ ನಾಮಪತ್ರ ಸಲ್ಲಿಕೆ ಕಾರ್ಯ ಶುರುವಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗದ ಹೆಸರಿನಲ್ಲಿ ನಕಲಿ ನೋಟಿಸ್ ಅನ್ನು ಸೃಷ್ಟಿಸಲಾಗಿದೆ.