ಉ.ಕ ಸುದ್ದಿಜಾಲ ಬೆಳಗಾವಿ :

ರಮೇಶ್ ಜಾರಕಿಹೊಳಿಗೆ ಸರ್ಕಾರ ಉರಳಿಸುವ ಶಕ್ತಿ ಇದೆ, ಸಹೋದರ ರಮೇಶ್ ಕಾಲೆಳೆದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನ ಮಾಡಲಿ ಎಂದು ನಾವೆಲ್ಲ ಪ್ರಾರ್ಥಿಸೋಣ ಎಂದರು.

ಗೋಕಾಕ್ ನಗರದಲ್ಲಿ ನಡೆದ ಉಪ್ಪಾರ ಸಮಾಜದ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಭಾಷಣದ ವೇಳೆ ರಮೇಶ್ ಜಾರಕಿಹೊಳಿ ಕಾಲೆಳೆದಿದ್ದಾರೆ. ಜಾರಕಿಹೊಳಿ ಸಹೋದರಿಗೆ ಸರ್ಕಾರ ಉರಳಿಸುವ ಶಕ್ತಿ ಇದೆ ಎಂದು ಹೇಳ್ತಾರೆ
ರಾಜ್ಯ ರಾಜಕಾರಣದಲ್ಲಿ ನಾಲ್ವರು ಸಹೋದರರಿದ್ದೇವೆ
ನಾಲ್ವರು ಒಂದೇ ಎಂದು ಭಾವಿಸಬಾರದು.

ನಾಲ್ವರು ಸಹೋದರರ ಕೆಲಸವೂ ಬೇರೆ ಬೇರೆ ಇದೆ, ಯಾರೂ ಕನ್ಫೂಸ್ ಮಾಡಿಕೊಳ್ಳಬಾರದು. ನಮ್ಮಲ್ಲಿ ಸರ್ಕಾರ ಉರಳಿಸುವ ಶಕ್ತಿ ರಮೇಶ್ ಜಾರಕಿಹೊಳಿ ಮಾತ್ರ ಇದೆ. ಉಳಿದ ನಾಲ್ವರು ಸಹೋದರರು ಸರ್ಕಾರ ಉರಳಿಸುವುದರ ಭಾಗವಾಗುವುದಿಲ್ಲ. ರಮೇಶ್ ಜಾರಕಿಹೊಳಿಗೆ ಮಾತ್ರ ಸರ್ಕಾರ ಉರಳಿಸುವ ಶಕ್ತಿ ಇದೆ. ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನ ಮಾಡಲೆಂದು ದೇವರಲ್ಲಿ ಪ್ರಾರ್ಥಿಸೋಣ ಎಂದರು.