ಉ.ಕ ಸುದ್ದಿಜಾಲ ಹಾವೇರಿ :

ಅತಿಯಾದ ವೇಗದಿಂದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ದೇವಗಿರಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ಹಾವೇರಿ ತಾಲೂಕಿನ ವರದಹಳ್ಳಿ ಗ್ರಾಮದ ನಿವಾಸಿ ವೀರೇಶ್ ಹಾನಗಲ್ (30) ವರ್ಷದ ವ್ಯಕ್ತಿಯ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಇನ್ನೂ ಕಾರಿನಲ್ಲಿದ್ದ ಸುರೇಶ್ ರಾಯನಗೌಡ ಎಂಬ 29 ವರ್ಷದ ವ್ಯಕ್ತಿಯ ಕಾಲುಗಳಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಲಾಗುತ್ತಿದೆ.