ಉ.ಕ ಸುದ್ದಿಜಾಲ ಹುಬ್ಬಳ್ಳಿ :

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ಪ್ರಕರಣದಲ್ಲಿ ಮತ್ತೊರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾನೆ. ಪ್ರಕರಣದಲ್ಲಿ ಸಾವಿನ ಸಂಖ್ಯೆ ಈಗ ಐದಕ್ಕೆ ಏರಿಕೆಯಾಗಿದೆ. ಶಂಕರ್ ಉರಬಿ (29) ಮೃತ ದುರ್ದೈವಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಕಳೆದ ಭಾನುವಾರ ರಾತ್ರಿ ನಡೆದಿದ್ದ ಸಿಲಿಂಡರ್ ಬ್ಲಾಸ್ಟ್​ ಪ್ರಕರಣದಲ್ಲಿ ಈಗ ಮತ್ತೊಬ್ಬ ದುರ್ದೈವಿ ಪ್ರಾಣ ಕಳೆದುಕೊಂಡಿದ್ದಾನೆ. ಹುಬ್ಬಳ್ಳಿಯ ಸಾಯಿನಗರದಲ್ಲಿ ಈ ದುರ್ಘಟನೆ ನಡೆದಿತ್ತು. ಅಯ್ಯಪ್ಪ ಸನ್ನಿಧಿಯಲ್ಲಿ ಗ್ಯಾಸ್​ ಸೋರಿಕೆಯಾಗಿ ಸಿಲಿಂಡರ್ ಬ್ಲಾಸ್ಟ್ ಆಗಿತ್ತು.

ಅಯ್ಯಪ್ಪ ಸನ್ನಿಧಿಯಲ್ಲಿ ಹೊತ್ತಿಕೊಂಡಿದ್ದ ಬೆಂಕಿಯಿಂದ 9 ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಗೊಂಡವರನ್ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಉಳಿದ ನಾಲ್ವರು ಗಾಯಾಳುಗಳಿಗೆ ಇನ್ನೂ ಚಿಕಿತ್ಸೆ ನಡೆಯುತ್ತಿದೆ.

ಕಿಮ್ಸ್ ನಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಶಂಕರ ಉರಬಿ ಕಳೆದ 13 ವರ್ಷಗಳಿಂದ ಕಿಮ್ಸ್ ಆಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದ ಕಳೆದ ವಾರ ನಡೆದ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಂಕರ ಒಂದು ವಾರದಿಂದ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕರ್ ಇಂದು ಸಾವು ಧಾರವಾಡದ ಸತ್ತೂರ ನಿವಾಸಿಯಾಗಿದ್ದ ಶಂಕರ ಉರಬಿ ದೊಡ್ಡಮ್ಮ ಮಂಜುಳಾ ಚವಾಣ್ ಮನೆಯಲ್ಲೇ ಇದ್ದ ಶಂಕರ.