ಉತ್ತರ ಕರ್ನಾಟಕ ಸುದ್ದಿಜಾಲ ಹುಬ್ಬಳ್ಳಿ :
ಇಂದಿನಿಂದ ಹತ್ತು ದಿನಗಳ ಕಾಲ ರಾತ್ರಿ ಕರ್ಫ್ಯೂ ಜಾರಿ, ರಾಜ್ಯಾದ್ಯಂತ ಕಟ್ಟುನಿಟ್ಟಿನ ಜಾರಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಒಮೈಕ್ರಾನ್ ಮತ್ತು ಕೋವಿಡ್ ವ್ಯಾಪಕತೆ ತಡೆಗಟ್ಟುವ ನಿಟ್ಟಿನಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೆಲವರು ರಾತ್ರಿಯಲ್ಲಿ ಮಾತ್ರ ಕೋವಿಡ್ ಹರಡುತ್ತಾ ಅಂತ ಪ್ರಶ್ನಿಸ್ತಾರೆ ಅಂಥವರಿಗೆ ನಾವೇನೂ ಮಾಡೋಕೆ ಆಗಲ್ಲ. ವೈಜ್ಞಾನಿಕ ದೃಷ್ಟಿಕೋನದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಿದ್ದೇವೆ. ಈಗಾಗಲೇ ಘೋಷಣೆ ಮಾಡಿದಂತೆ 10 ದಿನಗಳ ಕಾಲ ರಾತ್ರಿ ಕರ್ಫ್ಯೂ ಇರಲಿದೆ.
ಹೋಟೆಲ್, ಬಾರ್, ಪಬ್ ಇತ್ಯಾದಿಗಳು ಯಾವುದೇ ಚಟುವಟಿಕೆ ನಡೆಸುವಂತಿಲ್ಲ. ಇದಕ್ಕೆ ಜನರು ಸಹ ಸಹಕಾರ ನೀಡಬೇಕು. ಕೋವಿಡ್ ನಿಯಂತ್ರಣಕ್ಕೆ ಇದು ಅನಿವಾರ್ಯ. ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮ ಅನಿವಾರ್ಯ. ರಾತ್ರಿ ಕರ್ಫ್ಯೂ ಜೊತೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕಿದೆ. ಕರ್ನಾಟಕ ಒಂದೇ ಅಲ್ಲದೆ ದೇಶದ ಇತರ ರಾಜ್ಯಗಳಲ್ಲಿಯೂ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಎರಡು ಡೋಸ್ ತೆಗೆದುಕೊಳ್ಳದೇ ಇರೋರಿಗೆ ಪ್ರವೇಶವಿಲ್ಲ. ಈ ಕುರಿತು ಈಗಾಗಲೇ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಖಾಸಗಿ ಸಂಸ್ಥೆಗಳಿಗೂ ಇದು ಅನ್ವಯ ಆಗುತ್ತೆ. 15 ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಹಾಕೋಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜನವರಿ 03 ಕ್ಕೆ ಸಿಎಂ ಬೊಮ್ಮಾಯಿ ಚಾಲನೆ ಕೊಡ್ತಾರೆ. ಕೇಂದ್ರ ಸರ್ಕಾರ ಈಗಾಗಲೇ ಅಗತ್ಯ ಡೋಸ್ ಕೊಟ್ಟಿದೆ. 60 ವರ್ಷ ಮೇಲ್ಪಟ್ಟ ಕೋಮಾರ್ಬಲಿಟಿ ಇರೋ ಹೆಲ್ತ್ ವರ್ಕರ್ಸ್ ಗೆ ಬೂಸ್ಟರ್ ಡೋಸ್ ಕೊಡಲಾಗುತ್ತೆ. ಜನವರಿ 10 ನಂತರ ಬೂಸ್ಟರ್ ಡೋಸ್ ಗೆ ಚಾಲನೆ ಕೊಡಲಿದ್ದೇವೆ ಎಂದು ಹೇಳಿದರು.