ಉ.ಕ ಸುದ್ದಿಜಾಲ ಹುಬ್ಬಳ್ಳಿ :
ಯುವಕನೊಬ್ಬ ಪೊಲೀಸ್ ಠಾಣೆಯಲ್ಲಿಯೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಹಳೆ ಹುಬ್ಬಳ್ಳಿಯ ಇಂಡಿ ಪಂಪ್ ಸರ್ಕಲ್ ನ ಬಿರಿಯಾನಿ ಹೌಸ್ ಅಂಗಡಿಯ ಮಾಲೀಕರ ಜೊತೆ ರಾಘವೇಂದ್ರ ಎಂಬ ಯುವಕನ ನಡುವೆ ಮಾತಿಗೆ ಮಾತು ಬೆಳೆದು ಅತಿರೇಕಕ್ಕೆ ಹೋದ ಪರಿಣಾಮ ಬಿರಿಯಾನಿ ಹೌಸ್ ಮಾಲೀಕರು ರಾಘವೇಂದ್ರ ಯುವಕನನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದ ವೇಳೆ, ಪೊಲೀಸರು ಬಿರಿಯಾನಿ ಹೌಸ್ ಮಾಲಿಕ ಹಾಗೂ ರಾಘವೇಂದ್ರ ಎಂಬ ಯುವಕನನ್ನು ವಿಚಾರಣೆ ಮಾಡುತ್ತಿದ್ದ ಪೊಲೀಸರ ಮುಂದೆಯೇ ರಾಘವೇಂದ್ರ ಬ್ಲೇಡ್ ನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಈ ಸಂದರ್ಭದಲ್ಲಿ ಅಲ್ಲೆ ಇದ್ದ ಹಿರಿಯ ಅಧಿಕಾರಿಗಳು ಅಲ್ಲಿಂದ ಕಾಲ್ಕಿತ್ತಿದ್ದು, ಗಾಯಗೊಂಡ ಯುವಕನನ್ನು ಬಿರಿಯಾನಿ ಹೌಸ್ ನವರೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಯುವಕ ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.