ಉ.ಕ ಸುದ್ದಿಜಾಲ ಹುಕ್ಕೇರಿ :

ಚಲಿಸುತ್ತಿರುವ ಕೆಎಸ್ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಅವಘಡ.;ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ರಾಷ್ಟ್ರೀಯ ಹೆದ್ದಾರಿ-4 ರ ಮೇಲೆ ಘಟನೆ.

ಬೆಳಗಾವಿಯಿಂದ ಚಿಕ್ಕೋಡಿಗೆ ಆಗಮಿಸಿದ್ದಾಗ ಆಕಸ್ಮಿಕವಾಗಿ ಬೆಂಕಿ ಅವಘಡ. ಕೆಎ 42 ಎಫ್ 0806 ಬೆಳಗಾವಿ ಚಿಕ್ಕೋಡಿ ಬಸ್. ಬೆಂಕಿ ಕಾಣಿಸುತ್ತಿದ್ದಂತೆ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ ಚಾಲಕ ಹಾಗೂ ನಿರ್ವಾಹಕ.

ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ತೊಂದರೆ ಸಂಭವಿಸಿಲ್ಲ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.