ಉ.ಕ ಸುದ್ದಿಜಾಲ‌ ಹುಕ್ಕೇರಿ :

ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಿ ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಸ್ಪಿ ಭೀಮಾಶಂಕರ ಗುಳೇದ ಶುಕ್ರವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ಪರಶುರಾಮ ನಾಯಕ ಹಾಗೂ ಬಸವರಾಜ‌ ಸಿಂಧೆ ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳು ಕುಡಿದ ಮತ್ತಿನಲ್ಲಿ ದುಷ್ಕೃತ್ಯ ಎಸಗಿದ್ದಾರೆ. ಇಬ್ಬರು ಗೋವಾದಲ್ಲಿ ಗಾರೆ ಕೆಲಸ ಮಾಡುತ್ತಿದ್ದರು ಎಂದು ಎಸ್ಪಿ ತಿಳಿಸಿದ್ದಾರೆ.

ಘಟನೆಯಲ್ಲಿ ಓರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ (ಹತ್ತರಕಿ NH4) ಬೆನಕನಹೊಳಿ ಗ್ರಾಮದ ಬಳಿ ಹುಕ್ಕೇರಿ – ಬೆಳಗಾವಿ ತಡೆರಹಿತ ಬಸ್ ಮೇಲೆ ದುಷ್ಕರ್ಮಿಯೊಬ್ಬ ಕಲ್ಲು ತೂರಾಟ ನಡೆಸಿದ್ದಾನೆ. ಪರಿಣಾಮ ಬಸ್​ನ ಎಡಭಾಗದ ಗ್ಲಾಸ್ ಒಡೆದು ಕಾಮತ್ಯಾಟ್ಟಿ ಗ್ರಾಮದ ಪ್ರಯಾಣಿಕ ರಮೇಶ್ ಚಿವಟೆಗೆ ಗಾಯಗೊಂಡಿದ್ದಾರೆ.

ಮತ್ತೊಂದೆಡೆ, ಮುಂಬೈಯಿಂದ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ಮಹಾರಾಷ್ಟ್ರ ಸಾರಿಗೆ ಬಸ್ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ 112 ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ.

ಗಾಯಗೊಂಡ ರಮೇಶ್ ಚಿವಟೆಗೆ ಅವರಿಗೆ ಯಮಕರಮಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಯಮಕರಮಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೊತೆಗೆ ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.