ಉ.ಕ‌ ಸುದ್ದಿಜಾಲ ಹುಕ್ಕೇರಿ:

ಅ.18 ರಂದು ಮೊದಲ ಬಾರಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣಕ್ಕೆ ಭೇಟಿ ನೀಡಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡುವರು ಎಂದು ಕಾಂಗ್ರೆಸ್ ಮುಖಂಡ ಎ ಬಿ ಪಾಟೀಲ ತಿಳಿಸಿದರು.

ಹುಕ್ಕೇರಿ ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಪಟ್ಟಣಕ್ಕೆ ಭೇಟಿ ನೀಡುತ್ತಿರುವ ಡಿ.ಕೆ.ಶಿವಕುಮಾರ್ ಅವರು ಪಟ್ಟಣದಲ್ಲಿ ಮಧ್ಯಾಹ್ನ 3 ಗಂಟೆಗೆ ವಿಜಯ ರವದಿ ಫಾರ್ಮಹೌಸ್‌ನಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡುವರು. ಅದೇ ಸಂದರ್ಭದಲ್ಲಿ ಅವರನ್ನು ಅಭಿನಂದಿಸಿ ಸತ್ಕರಿಸಲಾಗುವುದು ಎಂದರು.

ಈ ಸಭೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸುವರು ಎಂದರು.

ಮಾಜಿ ಸಚಿವ, ಮುಖಂಡ ಶಶಿಕಾಂತ ನಾಯಿಕ ಮಾತನಾಡಿ, ಸೌರಶಕ್ತಿ ವಿದ್ಯುತ್ ಪಡೆಯಲು ರಾಜ್ಯ ಸರ್ಕಾರ ಸಬ್ಸಿಡಿಯನ್ನು ಶೇ.50 ರಿಂದ ಶೇ.80ಕ್ಕೆ ಹೆಚ್ಚಿಸಿರುವುದಕ್ಕೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿ ರೈತರು ಈ ಯೋಜನೆಯ ಲಾಭ ಪಡೆಯಲು ವಿನಂತಿಸಿದ್ದಾರೆ.