ಹುಕ್ಕೇರಿ :

ಸಾಲಭಾದೆ ತಾಳಲಾರದೆ ರೈತನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದಲ್ಲಿ ನಡೆದಿದೆ.

ಯರನಾಳ ಗ್ರಾಮದ ಸಿಕಂದರ ದಸ್ತಗೀರ ಸನದಿ (38) ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಬೆಳೆದ ಬೆಳೆ ಕೈಗೆ ಸಿಗದೆ ನಷ್ಟ ಅನುಭವಿಸಿದ್ದು ಮಾಡಿದ ಸಾಲ ಹೆಚ್ಚಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಸ್ವಂತ  ಜಮೀನಿನಲ್ಲಿ ತರಕಾರಿ ಬೆಳೆದು ಜೀವನ ನಡೆಸುತ್ತಿದ್ದ ಸಿಕಂದರ ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನಲೆಯಲ್ಲಿ ಬೆಳೆದ ಬೆಳೆಗೆ ಯೋಗ್ಯ ಬೆಲೆ ಸಿಗದೆ ಸಾಲ ಮಾಡಿ ತನ್ನ ಇಬ್ಬರು ಗಂಡು ಮಕ್ಕಳು ಮತ್ತು ತಾಯಿ ಹಾಗೂ ಹೆಂಡತಿಯೊಂದಿಗೆ ಜೀವನ ಸಾಗಿಸುತ್ತಿದ್ದ, ಸ್ಥಳಿಯ ಕೃಷಿ ಸಹಕಾರಿ ಸಂಸ್ಥೆ ಮತ್ತು ಖಾಸಗಿ ಸಂಸ್ಥೆಗಳಿಂದ ಪಡೆದ ಸಾಲ ತಿರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಮಕನಮರಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.