ಉ.ಕ ಸುದ್ದಿಜಾಲ ಹುಕ್ಕೇರಿ :

ಹಿಂದೂಗಳು ಪೂಜಿಸುವ ಗೋಮಾತೆಯನ್ನ ರಕ್ಷಿಸಲು ಮುಂದಾಗಿದ್ದ ಶ್ರೀ ರಾಮ ಸೇನೆ ಕಾರ್ಯಕರ್ತರ ಮೇಲೆ ಕೆಲ ಪುಂಡರು ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ. ಮೊನ್ನೆ ಕಸಾಯಿ ಖಾನೆಗೆ ಗೋವುಗಳನ್ನ ತುಂಬಿಕೊಂಡು ಹೋಗುತ್ತಿದ್ದ ವಾಹನ ಬೆನ್ನಟ್ಟಿ ಮರಳಿ ಗೋಶಾಲೆಗೆ ವಾಹನ ಸಮೇತವಾಗಿ ಗೋವುಗಳನ್ನ ತಂದು ರಕ್ಷಣೆ ಮಾಡಿದ್ದ ಶ್ರೀರಾಮ ಸೇನೆ ಕಾರ್ಯಕರ್ತರು ಮಾಡಿದ್ರು.

ಮತ್ತೆ ಗೋಶಾಲೆಯಿಂದ ವಾಹನವನ್ನ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಪ್ರಶ್ನಿಸಿದ ಶ್ರೀರಾಮ ಕಾರ್ಯಕರ್ತರನ್ನ ತೆಂಗಿನ ಮರಕ್ಕೆ ಕಟ್ಟಿ ಹಾಕಿ ಕ್ರೂರವಾಗಿ ಹಲ್ಲೆ ಮಾಡಿ ಪುಂಡಾಟ ನಡೆಸಿದ್ದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

ಇನ್ನು ಶ್ರೀ ರಾಮ ಸೇನೆಯ ಕಾರ್ಯಕರ್ತರಿಗೆ ತೆಂಗಿನ ಮರಕ್ಕೆ ಕಟ್ಟಿಹಾಕಿ ನೀರು ಕುಡಿಸಿ ಕಟ್ಟಿಗೆ ಹಾಗೂ ರಾಡನಿಂದ ಹಲ್ಲೆ ಮಾಡಿದ್ದ ಪುಂಡರ ವಿರುದ್ಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲು ಹೊದ್ರೆ ಯಮಕನಮರಡಿ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಶ್ರೀ ರಾಮ ಸೇನೆ ಜಿಲ್ಲಾಧ್ಯಕ್ಷ ವಿಠ್ಠಲ ಗಡ್ಡೆ ಯಮಕನಮರಡಿ ಪೊಲೀಸರ ವಿರುದ್ಧ ಆರೋಪಿಸಿ ತಮ್ಮ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.

ಇನ್ನು ಘಟನೆ ಕುರಿತು ಪೊಲೀಸರಿಗೆ ಸಂಪೂರ್ಣ ಮಾಹಿತಿ ಇದ್ರು ಯಾವುದೇ ಪರಿಶೀಲನೆ ಮಾಡದೇ ತಪ್ಪಿತಸ್ಥರ ವಿರುದ್ದ ಪ್ರಕರಣ ಕೂಡ ದಾಖಲಿಸದೆ ಇರುವುದು ಹಿಂದೂ ಕಾರ್ಯಕರ್ತರಿಗೆ ಅನುಮಾನಕ್ಕೆ ಕಾರಣವಾಗಿದೆ.

ಇನ್ನು ಸುದ್ದಿ ತಿಳಿದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಯಮಕನಮರಡಿ ಪೊಲೀಸ್ ವಿರುದ್ಧ ಕೆಂಡಕಾರಿದ್ದಾರೆ. ಗೋ ಹತ್ಯೆ ನಿಷೇದ ಕಾಯ್ದೆ ಜಾರಿಯಲ್ಲಿದೆ ಎಂದು ಗೊತ್ತಿದ್ದರೂ ಇಂತಹ ಕೃತ್ಯ ಮಾಡಲು ಮುಂದಾದ ದುಷ್ಟರನ್ನು ಪ್ರಶ್ನೆ ಮಾಡಲು ಹೋದ ಹಿಂದೂ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದು ಖಂಡನೀಯ

ಇಂಗಳಿ ಗ್ರಾಮದ ಮುಸ್ಲಿಂ ಸಮುದಾಯದ ಕೀಡಿಗೇಡಿಗಳು ಹಿಂದೂ ಕಾರ್ಯಕರ್ತರ ಕೊಲೆ ಮಾಡಲು ಮುಂದಾಗಿದ್ದಾರೆ. ಆದ್ರೆ ಪೊಲೀಸರು ಕೂಡ ಪ್ರಕರಣ ದಾಖಲಿಸದೆ ಅವರನ್ನು ಬಂದಿಸಿಲ್ಲ ಕೂಡಲೇ ಅವರನ್ನು ಬಂದಿಸಿ ಕೊಲೆ ಪ್ರಕರಣ ದಾಖಲಿಸಬೇಕು.

ಯಮಕನಮರಡಿ ಇನ್ಸ್ಪೆಕ್ಟರ್ ನನ್ನು ಕೆಲಸದಿಂದ ವಜಾ ಮಾಡಬೇಕು ಇಲ್ಲದಿದ್ದರೆ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ನಾಳೆ ರಾಜ್ಯದಾದ್ಯಂತ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಕೊಡುತ್ತೇವೆ ಎಂದು ಪ್ರಮೋದ ಮುತಾಲಿಕ್ ಸ್ಪಷ್ಟನೆ ನೀಡಿದ್ದಾರೆ.

ಗೋ ಮಾತೆಯನ್ನ ರಕ್ಷಿಸಲು ಹೋದ ಶ್ರೀ ರಾಮ ಸೇನೆ ಕಾರ್ಯಕರ್ತರ ಮೇಲೆ ಗೊಂಡಾಗಿರಿ ಮೆರೆದ ಪುಂಡರ ಮೇಲೆ ಕ್ರಮ ಕೈಗೊಳ್ಳುವಂತೆ ಶ್ರೀ ರಾಮ ಸೇನೆ ಜಿಲ್ಲಾಧ್ಯಕ್ಷರು ಬೆಳಗಾವಿ ಜಿಲ್ಲಾ ಪೊಲೀಸರಿಗೆ ಆಗ್ರಹಿಸಿದ್ದು ಕ್ರಮ ಆಗದಿದ್ದರೆ ನಾಳೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆಯನ್ನ ನೀಡಿದ್ದು ಇನ್ನಾದರೂ ಪೊಲೀಸರು ಎಚ್ಚೆತ್ತುಕೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತಾರಾ ಅನ್ನುವುದನ್ನು ಕಾದು ನೋಡಬೇಕಿದೆ