ಉ.ಕ ಸುದ್ದಿಜಾಲ ಹುಕ್ಕೇರಿ :
77ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರದಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಅತಿಥಿಯಾಗಿ ಭಾಗವಹಿಸಲು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಸಾಗರ ಮಲ್ಲಪ್ಪ ಬೆಕ್ಕೇರಿ
ಆಯ್ಕೆಯಾಗಿದ್ದಾರೆ.
ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ “ಮೇರಿ ಮಿಟ್ಟಿ ಮೇರಾ ದೇಶ” ಕಾರ್ಯಕ್ರಮದಲ್ಲಿ ಅಮೃತ ವಾಟಿಕಾ ನಿರ್ಮಾಣ ಮಾಡಿದ್ದಕ್ಕಾಗಿ ಕಾರ್ಯಕ್ರಮದ ಅಧಿಕಾರಿ ಶ್ರೀಶೈಲ ಕೋಲಾರ ಅವರ ಮಾರ್ಗದರ್ಶನದಲ್ಲಿ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿ ಸಾಗರ ಬೆಕ್ಕೇರಿ ಆಯ್ಕೆಯಾಗಿದ್ದಾರೆ.
ಇಡೀ ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾದ 6 ಜನ ವಿದ್ಯಾರ್ಥಿಗಳಲ್ಲಿ ಸಾಗರ ಬೆಕ್ಕೇರಿ ಅವರು ಒಬ್ಬರಾಗಿದ್ದಾರೆ.
ಸಾಗರ ಬೆಕ್ಕೇರಿ ಆಯ್ಕೆಯಾಗಿದ್ದನ್ನು ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.