ಉ.ಕ ಸುದ್ದಿಜಾಲ ಹುಕ್ಕೇರಿ :

ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ಸೇರಿ ಮೂವರು ನೀರು ಪಾಲಾಗಿರುವ ಘಟನೆ ಹುಕ್ಕೇರಿ ತಾಲ್ಲೂಕಿನ ಬೆನಕನಹೊಳಿ ಗ್ರಾಮದ ಬಳಿ ಘಟಪ್ರಭಾ ನದಿಯಲ್ಲಿ ಸಂಭವಿಸಿದೆ.

ಬೆನಕನಹೊಳಿ ಗ್ರಾಮದ ಲಕ್ಷ್ಮಣರಾಮ ಅಂಬಲಿ (49), ಪುತ್ರರಾದ ರಮೇಶ ಅಂಬಲಿ (14), ಯಲ್ಲಪ್ಪ ಅಂಬಲಿ (12) ನೀರಿನಲ್ಲಿ ಮುಳುಗಿರುವವರು.

ಭಾನುವಾರ ಸಂಜೆ ಮೀನಿನ ಬಲೆ ಹಾಕಲು ನದಿಗೆ ಇಳಿದ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೋಮವಾರ ಬೆಳಿಗ್ಗೆಯಿಂದ ಮೂವರಿಗಾಗಿ ಎನ್ ಡಿಆರ್ ಎಫ್ ತಂಡದಿಂದ ಶೋಧಕಾರ್ಯ ಮುಂದುವರಿದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ‌.

ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶೋಧ ಕಾರ್ಯ ಮುಂದುವರೆದಿದ್ದು ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.