ಉ.ಕ ಸುದ್ದಿಜಾಲ ಹುಕ್ಕೇರಿ :

ಮಾಸ್ಕ್ ಹಾಕುವ ವಿಚಾರದಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಪಾಲಿಸಬೇಕು ಅನ್ನುವುದು ನನ್ನ ನಿಲುವು, ಅದೇ ನನ್ನ ಹೇಳಿಕೆಯೂ ಆಗಿತ್ತು. ನಾನು ಮಾಸ್ಕ್ ಹಾಕಬೇಡಿ ಎಂದು ಯಾರಿಗೂ ಹೇಳಿಲ್ಲ. ನನ್ನ ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳೋದು ಬೇಡ ನಾನು ಮಾತನಾಡಿರುವ ಬಗ್ಗೆ ಜನ ಅಪಾರ್ಥ ತಿಳಿಯಬೇಡಿ ಎಂದು ಫೇಸಬುಕ್ ಮೂಲಕ ಆಹಾರ ಮತ್ತು ಅರಣ್ಯ ಸಚಿವ ಉಮೇಶ ಕತ್ತಿ ಮನವಿ ಮಾಡಿಕೊಂಡಿದ್ದಾರೆ.

ತಮ್ಮ ಫೇಸ್‌ಬುಕ್ ಪುಟದಲ್ಲಿ ಮನವಿ ಮಾಡಿಕೊಂಡ ಅವರು, ರಾಜ್ಯ ಸರ್ಕಾರದ ಜವಬ್ದಾರಿಯುತ ಸ್ಥಾನದಲ್ಲಿರುವ ನನಗೆ, ನನ್ನ ಜವಬ್ದಾರಿಯ ಸಂಪೂರ್ಣ ಅರಿವಿದೆ. ಆದರೆ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಮಾಧ್ಯಮದಲ್ಲಿ ವರದಿಯಾಗಿದೆ. ಕೋವಿಡ್ ನಂತಹ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ನಮಗೆಲ್ಲರಿಗೂ ನಮ್ಮ ಹೊಣೆಗಾರಿಕೆ ಬಗ್ಗೆ ತಿಳಿದಿದೆ. ಹೀಗಾಗಿ ಕೋವಿಡ್ ಮುಗಿಯುವ ತನಕ ನಾವೆಲ್ಲರೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ ಎಂದು ಮನವಿ ಮಾಡಿಕೊಂಡಿದ್ದಾರೆ.