ಕಾಗವಾಡ :

ಮೊನ್ನೆಯಷ್ಟೇ ಕಾಗವಾಡದ‌ ಮಾಜಿ ಶಾಸಕ ರಾಜು ಕಾಗೆ ಅವರನ್ನು ರಮೇಶ ಜಾರಕಿಹೊಳಿ‌ ಭೇಟಿಯಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸಹೋದರನಿಗೆ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದರು. ಇದೀಗ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ರಾಜು ಕಾಗೆ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕಾಗವಾಡ ಪಟ್ಟಣದಲ್ಲಿರುವ ಮಾಜಿ ಶಾಸಕ ಕಾಂಗ್ರೆಸ್ ನ ಹಿರಿಯ ಮುಖಂಡ ರಾಜು ಕಾಗೆ ಅವರ ಮನೆಗೆ ಕಾಂಗ್ರೆಸ್ ನ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಅರ್ಧ ಘಂಟೆಗೂ ಹೆಚ್ಚು ಕಾಲ ಕಾಗೆ ಮನೆಯಲ್ಲಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಹೋದರ ಚೆನ್ನರಾಜ ಹಟ್ಟಿಹೊಳಿ ಮೊದಲ ಬಾರಿಗೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಸಹೋದರನಿಗೆ ಪರಿಷತ್ ಚುನಾವಣೆಯಲ್ಲಿ ಬೆಂಬಲವಾಗಿ ನಿಲ್ಲುವಂತೆ ಲಕ್ಷ್ಮೀ ಹೆಬ್ಬಾಳಕರ ರಾಜು ಕಾಗೆ ಅವರಿಗೆ ಮನವಿ ಮಾಡಿಕೊಂಡಿದ್ದಾರಂತೆ‌. ಇತ್ತ ಮೊನ್ನೆಯಷ್ಟೇ ರಾಜು ಕಾಗೆ ಅವರ ಮನೆಗೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಭೇಟಿ ಮಾಡಿ ತಮ್ಮ ಸಹೋದರನಿಗೆ ಬೆಂಬಲಿಸುವಂತೆ ಮನವಿ‌ಮಾಡಿಕೊಂಡಿದ್ದರಂತೆ. ಇದೀಗ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಮಾಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕಾಗವಾಡ ಮತಕ್ಷೇತ್ರವನ್ನು 18 ವರ್ಷಗಳ ಕಾಲ ತನ್ನ ಹಿಡಿತದಲ್ಲಿಟ್ಟುಕೊಂಡಿದ್ದ ರಾಜು ಕಾಗೆ ಅಪಾರ ಪ್ರಮಾಣದ ಬೆಂಬಲಿಗರನ್ನು ಕ್ಷೇತ್ರದಲ್ಲಿ ಹೊಂದಿರುವುದರಿಂದ ಕಾಗೆ ಮನೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಬಂದು ನಮ್ಮಗೆ ಬೆಂಬಲ ನೀಡುವಂತೆ ಸೂಚನೆ ನೀಡುತ್ತಿದ್ದಾರೆ. ಈಗಾಗಲೇ ಕಾಗೆ ಅವರು ಕಾಂಗ್ರೆಸ್‌‌ನಿಂದ ಸ್ವಲ್ಪ ದೂರ ಉಳದಿದ್ದಾರೆ. ಬಿಜೆಪಿ ಪಕ್ಷದಲ್ಲಿ ಮುಂಚೂಣಿ ನಾಯಕರಾಗಿದ್ದ ರಾಜು ಕಾಗೆ ಅವರನ್ನು ಕಾಂಗ್ರೆಸ್ ಅಷ್ಟೊಂದು ಪರಿಣಾಮಕಾರಿಯಾಗಿ ಬಳಸಿಕೊಂಡಿಲ್ಲ. ಜೊತೆಗೆ ಪಕ್ಷ ಸಂಘಟನೆಯಲ್ಲಿ ಅವರಿಗಿರುವ ಅನುಭವವನ್ನು ಕಾಂಗ್ರೆಸ್ ಲಾಭ ಮಾಡಿಮಾಡಿಕೊಳ್ಳುವಲ್ಲಿ ಹಿಂದೆ ಬಿದ್ದಿದೆ. ಈ ಎಲ್ಲಾ ಕಾರಣಕ್ಕಾಗಿ ಮಾಜಿ ಶಾಸಕ ರಾಜು ಕಾಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವುದಂತು ಸತ್ಯ. ಈ ಬಾರಿ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ಸೂಚಿಸುತ್ತಾರಾ ಎನೂ ಬಿಜೆಪಿಗೆ ಬೆಂಬಲಿಸುತ್ತಾರಾ ಎನ್ನುವುದು ಈಗ ಪ್ರಶ್ನೆಯಾಗಿ ಉಳದಿದೆ.

ಈಗಾಗಲೇ ಬಿಜೆಪಿಯಿಂದ ಅಧಿಕೃತವಾಗಿ ಮಹಾಂತೇಶ ಕವಟಗಿಮಠಗೆ ಅವರಿಗೆ ಟಿಕೆಟ್ ಕನ್ಫರ್ಮ್ ಆಗಿದೆ. ಮತ್ತೊಂದು ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಕಣಕ್ಕಿಳಿಸಲು ಸಾಹುಕಾರ್ ಬಿಗ್ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಆದ್ರೆ, ಲಖನ್ ಜಾರಕಿಹೊಳಿ ಸ್ಪರ್ಧೆ ಬಗ್ಗೆ ಶಾಸಕ‌ ರಮೇಶ ಜಾರಕಿಹೊಳಿ‌ ಈವರೆಗೂ ಗುಟ್ಟು ಬಿಟ್ಟುಕೊಡುತ್ತಿಲ್ಲದಿದ್ದರೂ ಸಹೋದರನ ಪರವಾಗಿ ಈಗಾಗಲೇ ಒಂದು ಹಂತದ ಪ್ರಚಾರ ಕಾರ್ಯ ಮುಗಿಸಿದ್ದಾರೆ. ಇತ್ತ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ವಿವೇಕರಾವ್ ಪಾಟೀಲ್ ಇದೀಗ ಮರಳಿ ಮತ್ತೆ ಕಾಂಗ್ರೆಸ್ ನಿಂದ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದರು. ಆದ್ರೆ, ವಿವೇಕರಾವ್ ಪಾಟೀಲ್‌ಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆ ಸದ್ದಿಲ್ಲದೇ ಗೋಕಾಕ್ ಶಾಸಕ ವಿವೇಕರಾವ್ ಪಾಟೀಲ್ ಅವರನ್ನು ಬಿಜೆಪಿಗೆ ಸೆಳೆಯುವ ಮೂಲಕ ಸಹೋದರನನ್ನು ಗೆಲ್ಲಿಸಿಕೊಂಡು ಬರಲು ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ರಮೇಶ ಜಾರಕಿಹೊಳಿ ವಿವೇಕರಾವ್ ಪಾಟೀಲ‌ ಹಾಗೂ ಮಾಜಿ ಶಾಸಕ ರಾಜು ಕಾಗೆ ಅವರನ್ನು ಬಿಜೆಪಿಗೆ ಕರೆ ತರಲು ಮಾಸ್ಟರ್ ಪ್ಲ್ಯಾನ್ ಒಂದು ರೆಡಿ‌ ಮಾಡಿದ್ದು ಅದು ಎಷ್ಟರ ಮಟ್ಟಿಗೆ ಸಾಧ್ಯವಾಗುತ್ತೆ ಎನ್ನುವುದು ಬೆಳಗಟವಿ ಜನತೆಯಲ್ಲಿ ಕುತೂಹಲ ಮೂಡಿದೆ. ಒಟ್ಟಿನಲ್ಲಿ ಲಕ್ಷ್ಮೀ ಹೆಬ್ಬಾಳಕರ ತಮ್ಮ ಚನ್ನರಾಜ ಹಟ್ಟಿಹೊಳಿಯನ್ನು ಸೊಲಿಸಿ ಲಖನ ಜಾರಕಿಹೊಳಿಯನ್ನು ಗೆಲ್ಲಿಸಲು ಜಾರಕಿಹೋಳಿ ಸಹೋದರಾದ ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ ಜಾರಕಿಹೊಳಿ ಕಸರತ್ತು ನಡೆಸಿದ್ದಾರೆ.