ಉ.ಕ ಸುದ್ದಿಜಾಲ ಕಾಗವಾಡ :

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಪತ್ರಕರ್ತ ಕುಮಾರ ಪಾಟೀಲ ಇಂದು ಬೆಳಗಿನ ಜಾವ ಸ್ವ ಗ್ರಾಮದಲ್ಲಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ.

ಸುಮಾರು ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿರುವಂತ ಕುಮಾರ ಪಾಟೀಲ ವಿಜಯವಾಣಿ, ಸಂಯುಕ್ತ ಕರ್ನಾಟಕ ಹೀಗೆ ವಿವಿಧ ಪತ್ರಿಕೆಯಲ್ಲಿ ಕೆಲಸ ಮಾಡಿದ್ದಾರೆ.

ಇಂದು ಸ್ವ ಗ್ರಾಮ ಶೇಡಬಾಳದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಸೋಮವಾರ ಬೆಳಿಗ್ಗೆ 8 ಗಂಟೆಗೆ ಮೂರನೇ ದಿನ ಕಾರ್ಯ ಮಾಡಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ‌ ಸಿಗಲಿ ಎಂದು ಪತ್ರಕರ್ತರು ಮೌನಾಚರಣೆ ಮೂಲಕ ಶ್ರದ್ದಾಂಜಲಿ ಸಲ್ಲಿಸದ್ದಾರೆ.