ಕಾಗವಾಡ :

ಕರ್ನಾಟಕ ಮಹಾರಾಷ್ಟ್ರದ ಕೊಂಡಿಯಾಗಿ ಕಾಗವಾಡ ಚಕ್ ಪೊಸ್ಟ್ ಕಾರ್ಯ ನಿರ್ವಹಿಸುತ್ತದೆ. ಹೀಗಾಗಿ ಈ ಮಾರ್ಗವಾಗಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿರುವ ಪರಿಣಾಮ ಗಡಿ ಭಾಗದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು ಹೀಗಾಗಿ ಗಡಿಯಲ್ಲಿ ಹೈ ಅಲರ್ಟ ಇರುವಂತೆ ಜಿಲ್ಲಾಧಿಕಾರಿ‌ ಆರ್ ವೆಂಕಟೇಶಕುಮಾರ್ ಸೂಚಿಸಿದ್ದಾರೆ.

ಸರಕಾರದ ಮಾರ್ಗಸೂಚಿ ಪ್ರಕಾರ ನೆರೆಯ ಮಹಾರಾಷ್ಟ್ರ ರಾಜ್ಯದ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಗಳ ಪೂರ್ವ ಅವಧಿಯ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಆದ್ದರಿಂದ ನೆಗೆಟಿವ್ ವರದಿ ಹೊಂದಿದವರನ್ನು ಮಾತ್ರ ರಾಜ್ಯದೊಳಗೆ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಆರ್ ವೆಂಕಟೇಶಕುಮಾರ್ ಹಾಗೂ ಕಾಗವಾಡ ತಹಶೀಲ್ದಾರ ರಾಜೇಶ ಬುರ್ಲಿ

ಗಡಿಭಾಗದಲ್ಲಿರುವ ಚೆಕ್ ಪೋಸ್ಟ್ ಮೂಲಕ ಸಾಗುವ ಪ್ರತಿಯೊಂದು ವಾಹನವನ್ನು ತಡೆದು ಪ್ರಯಾಣಿಕರು ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕರ್ತವ್ಯ ನಿರತ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚನೆಯನ್ನು ನೀಡಿದ ಜಿಲ್ಲಾಧಿಕಾರಿ ಆರ್ ವೆಂಕಟೇಶಕುಮಾರ್.