ಉ.ಕ ಸುದ್ದಿಜಾಲ ಕಾಗವಾಡ :

ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಅವರು ತಮ್ಮ ಕ್ಷೇತ್ರದಲ್ಲಿಯ ನೀರಾವರಿ ಇಲಾಖೆಯ ಅನೇಕ ಅಭಿವೃದ್ಧಿ ಕಾಮಗಾರಿಗಳಿಗಾಗಿ 230 ರೂ. ಕೋಟಿ ವಿಶೇಷ ಅನುದಾನ ಮಂಜೂರು ಮಾಡಿಸಿದ್ದು, ಕ್ಷೇತ್ರದಾದ್ಯಂತ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಕಾಗವಾಡ ಕ್ಷೇತ್ರದಲ್ಲಿ ಎಲ್ಲ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದು, ಅದರಲ್ಲಿ ನೀರಾವರಿಗೆ ಹೆಚ್ಚಿನ ಅಧ್ಯತೆ ನೀಡಿದ್ದಾರೆ. ಕಳೆದ ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಅನೇಕ ಕಾಮಗಾರಿಗಳು ಅವರ ಅವಧಿಯಲ್ಲಿ ವೇಗ ಪಡೆದುಕೊಂಡಿವೆ.

ನೀರಾವರಿ ಕ್ಷೇತ್ರದಲ್ಲಿ ತಾವು ಶಾಸಕರಾಗುವ ಮೊದಲೇ ಅನೇಕ ಏತ ನೀರಾವರಿ ಯೋಜನೆಗಳನ್ನು ತಮ್ಮ ಕಾರ್ಖಾನೆಯಿಂದ ಮಾಡಿದ್ದಾರೆ. ಕ್ಷೇತ್ರದಲ್ಲಿ ಸುಮಾರ 1,300 ಕೋಟಿ ರೂ.ಗಳ ಬಸವೇಶ್ವರ ಏತ ನೀರಾವರಿ ಯೋಜನೆಯು ಕೊನೆಯ ಹಂತದಲ್ಲಿದ್ದು, ಈ ಯೋಜನೆಯ ಸನ್ಮಾನ್ಯ ಮುಖ್ಯಮಂತ್ರಿಗಳ ಹಸ್ತದಿಂದ ಶೀಘ್ರವೇ ಉದ್ಘಾಟನೆಗೊಳ್ಳಲಿದೆ.

ಅದೇ ರೀತಿ  ಈ ಯೋಜನೆಗೆ ಒಳ ಪಡದೆ ಇರುವ ಗ್ರಾಮಗಳ ಬರದ ನಾಡಿಗೆ ನೀರಾವರಿ ಕಲ್ಪಿಸುವ ಮಹತ್ವಕಾಂಕ್ಷಿ ಯೋಜನೆಯದ  ಸುಮಾರು 23 ಕೆರೆ ತುಂಬುವ ಯೋಜನೆಗಳನ್ನು ಜಾರಿಗೊಳಿಸಲು ಮತ್ತು ಕೆರೆ ತುಂಬಲು ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರು ಅನುಮೋದನೆ ನೀಡಿದ್ದು, ರೂ. 230 ಕೋಟಿ ವಿಶೇಷ ಅನುದಾನ ಮಂಜೂರು ಮಾಡಲು ಒಪ್ಪಿದ್ದಾರೆ.

ಇದರಿಂದ ಕ್ಷೇತ್ರದಲ್ಲಿ ಸಾರ್ವಜನಿಕರಿಂದ, ರೈತ ವರ್ಗದಿಂದ ಮುಖ್ಯಮಂತ್ರಿಗಳಿಗೆ ನೀರಾವರಿ ಸಚಿವರಿಗೆ ಹಾಗೂ ಶಾಸಕರಿಗೆ ಧನ್ಯವಾಗಳನ್ನು ತಿಳಿಸಿದ್ದು, ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಂಭ್ರಮಿಸಿದ್ದಾರೆ.