ಉ.ಕ ಸುದ್ದಿಜಾಲ ಕಾಗವಾಡ :

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೊಳೆ ಗ್ರಾಮದ ಹೊರವಲಯದ ಕಾಲುವೆಯಲ್ಲಿ ಸತ್ತ ಸ್ಥಿತಿಯಲ್ಲಿ ನವಜಾತ ಶಿಶುವಿನ ದೇಹ ಪತ್ತೆಯಾಗಿದೆ.

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕೌಲಗುಡ್ಡ-ಮೊಳೆ ರಸ್ತೆ ಮದ್ಯದ ಶಿವಾನಂದ ಹೊಸಮನಿ ತೋಟದ ಬಳಿ ಐನಾಪುರ ಏತ ನೀರಾವರಿ ಕಾಲುವೆಯಲ್ಲಿ ದುಸ್ಕರ್ಮಿಗಳು ಮಗುವನ್ನ ಎಸೆದು ಹೋಗಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿ ನೀರಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ ಘಟನಾ ಸ್ಥಳಕ್ಕೆ ಕಾಗವಾಡ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೂಡಲೇ ಗ್ರಾಮದ ಮುಖಂಡರಿಗೆ ಮತ್ತು ಕಾಗವಾಡ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ರಾಜ್ಯದ ಗಡಿಯಲ್ಲಿ ಮತ್ತೊಂದು ಮನಕುಲುಕುವ ಘಟನೆ ಸಾರ್ವಜನಿಕರನ್ನು ಬೆಚ್ಚಿ ಬಿಳಿಸಿದ್ದು, ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿ, ನಿಂತ ನೀರಿನಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಶಿಶು ಅಭಿವೃದ್ಧಿ ಅಧಿಕಾರಿ ಸಂಜೀವಕುಮಾರ ಸದಲಗೆ ಹಾಗೂ ಕಾಗವಾಡ ಪೋಲಿಸ್ ಠಾಣೆಯ ಪಿಎಸ್‌ಐ ಜಿ.ಜಿ. ಬಿರಾದರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೂ ಸ್ಥಳಕ್ಕೆ ಅಥಣ ಡಿವೈಎಸ್‌ಪಿ ಪ್ರಶಾಂತ ಮುನ್ನೋಳಿ, ಸಿಪಿಐ ಸಂತೋಶ ಹಳ್ಳೂರ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಗವಾಡ ಪೋಲಿಸ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.