ಉ.ಕ ಸುದ್ದಿಜಾಲ ರಾಯಬಾಗ :

ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಪಿ.ಎಸ್.ಐ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ನಿವಾಸದಲ್ಲಿ ನಡೆದಿದೆ.

ಸುರೇಶ ಬಾಬಾಸಾಬ ಖೋತ (59) ಮೃತ ಪಿ.ಎಸ್.ಐ ರಾಯಬಾಗ ಪೊಲೀಸ್ ಠಾಣೆಯಲ್ಲಿ ಹೆಚ್ಚುವರಿ ಪಿಎಸ್ಐಯಾಗಿ ಕರ್ತವ್ಯ. ನಿರ್ವಹಿಸುತ್ತಿದ್ದರು.

ಗಣೇಶೋತ್ಸವ ಹಿನ್ನಲೆ ಬಂದೋಬಸ್ತ್ ಮುಗಿಸಿಕೊಂಡು ಮರಳಿ ಮನೆಗೆ ಬಂದಾಗ ಹೃದಯಾಘಾತವಾಗಿದೆ.ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ನಿವಾಸದಲ್ಲಿ ಘಟನೆ ನಡೆದಿದ್ದು ತಕ್ಷಣವೇ ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ರವಾನೆ.

ಚಿಕಿತ್ಸೆ ಫಲಕಾರಿಯಾಗದೆ ಪಿಎಸ್ಐ ಸಾವುನಪ್ಪಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ‌.