ಉ.ಕ ಸುದ್ದಿಜಾಲ ಕಾಗವಾಡ :

ಕಾಗವಾಡ ಶಾಸಕ ರಾಜು ಕಾಗೆ ಆಪ್ತರಲ್ಲಿ ಒಬ್ಬರಾಗಿರುವ ಜೈನ ಸಮಾಜದ ಮುಖಂಡ ಗಜಾನನ ಯರಂಡೋಲಿ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್ ಶಾಸಕ ರಾಜು ಕಾಗೆ ಆಪ್ತ  ಗಜಾನನ ಯರಂಡೊಲಿ ಮಾಜಿ ಸಂಸದ ಅಣ್ಣಾಸಾಬ ಜೊಲ್ಲೆ ಮಾಜಿ ಶಾಸಕ ಶ್ರೀಮಂತ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ನಿನ್ನೆ ಅಥಣಿಯಲ್ಲಿ ನಡೆದ ಸಮಾವೇಶದಲ್ಲು ಕೂಡ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾಗಿ ಕಾಂಗ್ರೆಸ್ ಗೆ ಶಾಕ್ ನೀಡಿದ್ದರು ಆದರೆ ಮತ್ತೆ ಇವತ್ತು ಶಾಸಕ ರಾಜು ಕಾಗೆ ಆಪ್ತವಲಯದಲ್ಲಿ ಗುರುತಿಸಿಕೊಂಡ ಕೈ ಕಾರ್ಯಕರ್ತರು ಬಿಜೆಪಿ ಗೆ ಸೇರ್ಪಡೆಯಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಆಘಾತ ಉಂಟುಮಾಡಿದ್ದಾರೆ.