ಕಾಗವಾಡ :

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನ್ಯಾಯಯುತ ಬೇಡಿಕೆಗಳನ್ನು ಪರಿಗಣಿಸುವ ಕುರಿತಿರುವ ಬಗ್ಗೆ ಬೇಡಿಕೆ ಇಡೇರಿಸುವಂತೆ ಕಾಗವಾಡ ಶಾಸಕ ಶ್ರೀಮಂತ ಪಾಟೀಲ‌ ಮೂಲಕ ಸಿಎಂ ಬೊಮ್ಮಾಯಿಗೆ ಮನವಿ ಮಾಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಕಾಗವಾಡ ಶಾಸಕ ಶ್ರೀಮಂತ ಪಾಟೀಲಗೆ ಒತ್ತಾಯಿಸಿ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆಗಳನ್ನು ಜಾರಿಗೊಳಿಸುವುದು ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಮಾಡುವುದು ಹಾಗೂ ಪ್ರಾಥಮಿಕ / ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವುದು.

ಈ ಮೇಲಿನ ಅಂಶಗಳು ನೌಕರರ ಸಂಘದ ಬೇಡಿಕೆಗಳು ನ್ಯಾಯಯುತವಾಗಿದ್ದು , ಈ ಮನವಿಯನ್ನು ಪರಿಗಣಿಸಿ ಅನುಷ್ಠಾನಗೊಳಿಸಲು ಸಂಬಂಧಿಸಿದವರಿಗೆ ಆದೇಶ ಹೊರಡಿಸುವಂತೆ ನಿರ್ದೇಶನ ನೀಡಬೇಕಾಗಿ ಈ ಮೂಲಕ ಕಾಗವಾಡ ನೌಕರ ಸಂಘದ ಅಧ್ಯಕ್ಷ ಜಿ ಎಂ ಸಡ್ಡಿ ಇವರ ನೇತೃತ್ವದಲ್ಲಿ ರಾಜ್ಯ ಸರ್ಕಾರಿ ನೌಕರ ಎಲ್ಲ ಸದಸ್ಯರ ಒಳಗೊಂಡು ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಮೂಲಕ ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯರು.