ಉ.ಕ ಸುದ್ದಿಜಾಲ ಬೆಂಗಳೂರು :

ಬೆಳಗಾವಿ ಜಿಲ್ಲೆ ಕಾಗವಾಡ ಬಳಿ ಸಂಭವಿಸಿದ ಟ್ರ್ಯಾಕ್ಟರ್ ಅಪಘಾತದಲ್ಲಿ ಮೃತಪಟ್ಟ ಮೂವರು ಮಹಿಳೆಯರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ತಿಳಿಸಿದ್ದಾರೆ 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ನೀಡಲು ಮನವಿ ಮಾಡಿದಾಗ ಸಮ್ಮತಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ಘೋಷಣೆ ಮಾಡಿದ ಮುಖ್ಯಮಂತ್ರಿಗಳಿಗೆ ಸಚಿವರು ಧನ್ಯವಾದ ಸಲ್ಲಿಸಿದ್ದಾರೆ.


ಘಟನೆ ಬಗ್ಗೆ ಆಘಾತ ವ್ಯಕ್ತ ಪಡಿಸಿರುವ ಸಚಿವರು ಮೃತರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಸಚಿವ ಶಿವಾನಂದ ಪಾಟೀಲ ಅವರು ಗಾಯಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ