ಉ.ಕ ಸುದ್ದಿಜಾಲ ಕಾಗವಾಡ :
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕವಲಗುಡ್ಡ ಗ್ರಾಮದ ಸಿದ್ದಯೋಗಿ ಅಮರೇಶ್ವರ ಮಹಾರಾಜರ ಸಿದ್ದಶ್ರೀ ಸಂಸ್ಥೆಯ ಕರಿಯೋಗಸಿದ್ದ ಶಾಲೆಯ ವಾರ್ಷಿಕೋತ್ಸವ ಹಾಗೂ 13ನೇ ಹೊಂಬೆಳಕು ಮತ್ತು ವೆಬ್‌ಸೈಟ್ ಉದ್ಘಾಟನಾ ಕಾರ್ಯಕ್ರಮಕ್ಕೆ ಇಂದು (ಗುರುವಾರ) ವಿಧಾನ ಪರಿಷತ್ ಯತೀಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ಎಸ್.ಎಂ.ಲಾಳಿ ತಿಳಿಸಿದರು.
ಬಹುಮಾನ ವಿತರಣಾ ಕಾರ್ಯಕ್ರಮ ಗುರುವಾರ ಸಂಜೆ 4.30ಕ್ಕೆ ನಡೆಯಲಿದ್ದು, ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ರಾಜು ಕಾಗೆ ವಹಿಸಲಿದ್ದಾರೆ, ಅಥಿತಿಯಾಗಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ
ಇಂದು ಕವಲಗುಡ್ಡ ಗ್ರಾಮಕ್ಕೆ ಯತೀಂದ್ರ ಸಿದ್ದರಾಮಯ್ಯ ಆಗಮನ

