ಉ.ಕ ಸುದ್ದಿಜಾಲ ಖಾನಾಪೂರ :
ರಾಷ್ಟ್ರೀಯ ಹೆದ್ದಾರಿಯ ಮೇಲೆ ವೇಗವಾಗಿ ಚಲಿಸುತ್ತಿದ್ದ ಬೈಕನಿಂದ ಆಯತಪ್ಪಿ ಬಿದ್ದು ಸೈನಿಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಖಾನಾಪುರ ತಾಲೂಕಿನ ಇದ್ದಲಹೊಂಡ ಗ್ರಾಮದ ಬಳಿ ನಡೆದಿದೆ.
ರಜೆಗೆಂದು ಬೆಳಗಾವಿಗೆ ಬಂದಿದ್ದ ಸೈನಿಕ ಸೂರಬ್ ದ್ರೌಪದಕರ್ ಮೃತ ದುರ್ದೈವಿಯಾಗಿದ್ದಾನೆ. ರಾಷ್ಟ್ರೀಯ ಹೆದ್ದಾರಿಯ ಮೇಲೆ ವೇಗವಾಗಿ ಚಲಿಸುತ್ತಿದ್ದ ಬೈಕನಿಂದ ಆಯತಪ್ಪಿ ಬಿದ್ದು ಖಾನಾಪುರ ತಾಲೂಕಿನ ಇದ್ದಲಹೊಂಡ ಗ್ರಾಮದಲ್ಲಿ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಸಿಬ್ಬಂದಿಗಳು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಜೆಗೆಂದು ಬಂದಿದ್ದ ಯೋಧ ಅಪಘಾತದಲ್ಲಿ ಸಾವು!!!
